ದುಬೈ : ಮರಳು ಭೂಮಿಯಲ್ಲಿ ಕಳೆದ 47 ವರ್ಷದಿಂದ ಯುಎಇ ಬಂಟ್ಸ್ ನ ನಾಯಕನಾಗಿ ನಡೆಸಿಕೊಂಡು ಬರುತ್ತಿರುವ ಸರ್ವೋತ್ತಮ ಶೆಟ್ಟಿಯವರನ್ನು ಗಲ್ಫ್ ಬಂಟೋತ್ಸವ-2024 ಕಾರ್ಯಕ್ರಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನಿಸಲಾಯಿತು.
ಸರ್ವೋತ್ತಮ ಶೆಟ್ಟಿ ದಂಪತಿಗಳನ್ನು ಬಂಟ್ಸ್ ನ ಸಂಘಟನ ಸಮಿತಿ ಹಾಗೂ ಸಲಹಾ ಸಮಿತಿ ಮತ್ತು ಕಾರ್ಯಕರ್ತರು ಸೇರಿ ಮಾಡಿದ ಅದ್ದೂರಿಯ ಸನ್ಮಾನದಲ್ಲಿ ಸಮಿತಿಯ ಪದಾಧಿಕಾರಿಗಳು,ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಿನೂತನ ಶೈಲಿಯಲ್ಲಿ ಸನ್ಮಾನ: ಸರ್ವೋತ್ತಮ ಶೆಟ್ಟಿಯವರ ಸನ್ಮಾನದ ಪೇಟ,ಶಾಲು,ಸ್ಮರಣಿಕೆ,ಗೆಂದಳೆ ಸೀಯಳ,ಅಡಕೆ,ಬಾಳೆ ಗೊಣೆ,ತರಕಾರಿ ಬುಟ್ಟಿ,ಹಣ್ಣು ಹಂಪಲು,ಅಕ್ಕಿ ಮುಡಿ,ಭತ್ತ ಮುಡಿ,ಹಿಂಗಾರ,ಮಲ್ಲಿಗೆ ಹಾರ, ಬಣ್ಣದ ಕೊಡೆ,ಚೆಂಡೆ ವಾಲಗದೊಂದಿಗೆ ವೇದಿಕೆಗೆ ಮೆರವಣಿಗೆಯ ಮೂಲಕ ತರಲಾಯಿತು.
ವೇದಿಕೆಯಲ್ಲಿದ್ದ ಯುಎಇ ಬಂಟ್ಸ್ ನ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ,ಕಾರ್ಯದರ್ಶಿ ರವಿರಾಜ್ ಶೆಟ್ಟಿ, ಸಮಿತಿಯ ಪೋಷಕರು,ಸಂಘಟನ ಸಮಿತಿಯ ಪದಾಧಿಕಾರಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸರ್ವೋತ್ತಮ ಶೆಟ್ಟಿ ಮತ್ತು ಶ್ರೀಮತಿ ಉಷ ಶೆಟ್ಟಿಯವರಿಗೆ ಅರ್ಪಿಸಿ ಗೌರವ ಸಲ್ಲಿಸಿ ಸನ್ಮಾನಿಸಲಾಯಿತು.ಶ್ರೀಮತಿ ಶಶಿ ರವಿರಾಜ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು,ನಿತೇಶ್ ಶೆಟ್ಟಿ ಎಕ್ಕಾರ್ ಮತ್ತು ನಮ್ಮ ಕುಡ್ಲ ಚಾನೆಲ್ ನ ವಾರ್ತಾ ವಾಚಕಿ ಶ್ರೀಮತಿ ಪ್ರೀಯ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮ ನಿರೂಪಿಸಿದರು.
ವರದಿ: ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…