ಹಾಸನ: ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗೃತೆವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು.
ಇದೆ ವೇಳೆ ಶ್ರೀರಾಮಸೇನೆ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಮಾಧ್ಯಮದೊಂದಿಗೆ ಮಾತನಾಡಿ, ಇಡೀ ದೇಶದಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿಯ ಬಗ್ಗೆ ಪರ, ವಿರೋಧ ಚರ್ಚೆ ಕಾವೇರುತ್ತಿದೆ. ಕೆಲವು ಮೌಲ್ವಿಗಳು ತಿದ್ದುಪಡಿ ಆದ್ರೆ ದೇಶದಲ್ಲಿ ರಕ್ತಪಾತ ಆಗುತ್ತೆ ಅನ್ನೋ ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು. ಇದು ಗಲಭೆಗೆ ಪ್ರಚೋದನೆ ನೀಡುವ ಮುನ್ಸೂಚನೆ. ಹಿಂದೆಯೂ ಸಿಎಎ ಮತ್ತು ಎನ್.ಆರ್.ಸಿ. ಕೃಷಿ ಮಸೂದೆ ಮಂಡನೆಯದಾಗ ಇಂತಹ ಪ್ರಚೋದನೆಕಾರಿ ಹೇಳಿಕೆಗಳೇ ಗಲಭೆಗೆ ಕಾರಣವಾಗಿದ್ದವು. ಈಗಲೂ ಅದೇ ವಾತಾವರಣ ಸೃಷ್ಟಿಸುವ ಸಂಶಯವಿದ್ದು, ತಾವು ಜಿಲ್ಲೆಯದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ರಕ್ಷಣೆ ಹೆಚ್ಚಿಸಲು ಮನವಿ ಸಲ್ಲಿಸಿದರು. ಈ ಸಾರಿ ಯಾರಾದ್ರೂ ಉದ್ಧಟತನ, ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಂಡು ಸಾರ್ವಜನಿಕ ಶಾಂತಿ ಭಂಗ, ದೇವಸ್ಥಾನ, ಮಠ ಮಂದಿರ ಮೇಲೆ ದಾಳಿ ಮುಂತಾದ ಅಹಿತಕರ ಘಟನೆ ಜರುಗದಂತೆ ತಾವು ಜಿಲ್ಲೆಯದ್ಯಾಂತ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ, ಆಸ್ತಿಪಾಸ್ತಿಗೆ,ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಹೇಳಿದರು.
ಇದೆ ವೇಳೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್, ಗೌರವಾಧ್ಯಕ್ಷ ಕುಮಾರ್ ಯಡಿಯೂರ್, ಕಾರ್ಯಾಧ್ಯಕ್ಷರು ಮಹೇಶ್ ಕುಮಾರ್, ದುರ್ಗಾಸೇನೆ ಮಹಿಳಾ ಅಧ್ಯಕ್ಷೆ ನಾಗವೇಣಿ, ತಾಲೂಕ ಅಧ್ಯಕ್ಷ ಉಮೇಶ್ ಸಕಲೇಶಪುರ, ಜಿಲ್ಲಾ ಉಪಾಧ್ಯಕ್ಷರು ಪುನೀತ್, ಕಾರ್ಯದರ್ಶಿ ಮನು ಜಗತ್, ತಾಲೂಕ ಅಧ್ಯಕ್ಷರು ಪ್ರದೀಪ್ ಹಾಸನ್, ಅರಕಲಗೂಡು ತಾಲೂಕು ಅಧ್ಯಕ್ಷ ಅಮಿತ್ ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಪ್ರಕಾಶ್, ಅರಸೀಕೆರೆ ತಾಲೂಕು ಅಧ್ಯಕ್ಷ ವರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಮುಗುಳುರ್, ಜಿಲ್ಲಾ ಉಪಾಧ್ಯಕ್ಷರು ಪುನೀತ್ ಇತರರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…