ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ – ಬಂಟ್ವಾಳ ಉಪವಿಭಾಗ ದ ಆಶ್ರಯದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ , ರೋಟರಿ ಕ್ಲಬ್ ಮೊಡಂಕಾಪು, ನಮ್ಮ ನಾಡ ಒಕ್ಕೂಟ(ರಿ) ಬಂಟ್ವಾಳ ಘಟಕ ಮತ್ತು ಕಾರ್ಮೆಲ್ ಕಾಲೇಜು ಮೊಡಂಕಾಪು ಇವರ ಸಹಯೋಗದೊಂದಿಗೆ ಕಾರ್ಮೆಲ್ ಕಾಲೇಜು ಮೊಡಂಕಾಪು ನಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆದಿರುತ್ತದೆ.
ಕಾರ್ಯಕ್ರಮದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಸ್ ವಿಜಯ ಪ್ರಸಾದ್ ರವರು ಸೈಬರ್ ಅಪರಾಧಗಳು, ಮಾದಕ ದ್ರವ್ಯದ ಪರಿಣಾಮಗಳು, ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟಿರುತ್ತಾರೆ. ಈ ಕಾರ್ಯಕ್ರಮದಲ್ಲಿ ರೋಟರಿ ಮೊಡಂಕಾಪು ಅಧ್ಯಕ್ಷರಾದ ಶ್ರೀ. ಕ್ಯಾಪ್ಟನ್ ಅಲೆಕ್ಸಾಂಡರ್, ರೋಟರಿ ಗವರ್ನರ್ ರೋ| ಡಾ. ಗೋವರ್ಧನ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷರಾದ ಶ್ರೀ ರಹೀಂ , ನಮ್ಮ ನಾಡ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀ ಇಬ್ರಾಹಿಂರವರು ಹಾಜರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಬಗಿನಿ ನವೀನ ಎ.ಸಿ. ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ,ಸಂಸ್ಥೆಯ ಉಪನ್ಯಾಸಕರು ಭಾಗವಹಿಸಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…