ಬಂಟ್ವಾಳ : ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ ( 51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಸ್ವತಃ ಕೃಷಿಕರಾಗಿರುವ ಇವರು ನ.3 ರಂದು ಅವರ ತೋಟದ ತೆಂಗಿನ ಮರದಿಂದ ಕಾಯಿ ಕೀಳಲು ಮರಕ್ಕೆ ಹತ್ತಿದ್ದರು. ಆದರೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಸುಮಾರು 24 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಬೆಳಿಗ್ಗೆ ಚಿಕಿತ್ಸೆ ಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಹಾಗೂ ಮೂರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಅಂಗಾಂಗ ದಾನ
ಗಂಭೀರವಾಗಿ ಗಾಯಗೊಂಡಿದ್ದ ಗಿರಿಯಪ್ಪ ಅವರನ್ನು ಬದುಕಿಸಲು ವೈದ್ಯಕೀಯ ತಂಡ ಪ್ರಯತ್ನ ಮಾಡಿದೆಯಾದರೂ ಪ್ರಯತ್ನ ಫಲಿಸಲಿಲ್ಲ. ಹಾಗಾಗಿ ಕೊನೆಗಳಿಗೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಗಿರಿಯಪ್ಪ ಅವರ ಅಂಗಾಂಗ ದಾನಕ್ಕೆ ಮುಂದಾದರು. ಗಿರಿಯಪ್ಪ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…