ಜನ ಮನದ ನಾಡಿ ಮಿಡಿತ

Advertisement

ಸರಪಾಡಿ‌ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು ನಿಧನ

ಬಂಟ್ವಾಳ: ಸರಪಾಡಿ ಗ್ರಾಮದ ಪಡ್ಡಾಯಿಬೆಟ್ಟು ನಿವಾಸಿ, ಸರಪಾಡಿ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು(೮೯) ಅವರು ನ. ೨೭ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ಪ್ರಗತಿಪರ ಕೃಷಿಕರಾಗಿದ್ದ ನಾರಾಯಣ ಆಳ್ವ ಅವರು ಸುದೀರ್ಘ ಸಮಯ ಸಕ್ರೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿದ್ದು, ಬಿ.ರಮಾನಾಥ ರೈ ಅವರ ಆಪ್ತರಾಗಿದ್ದರು.
ಸರಪಾಡಿ ಮಂಡಲ ಪಂಚಾಯತ್ ನಲ್ಲಿ ಸುದೀರ್ಘ ೨೫ ವರ್ಷಗಳ ಕಾಲ‌ ಅಧ್ಯಕ್ಷರಾಗಿ, ಮಣಿನಾಲ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಸರಪಾಡಿ ಸರಕಾರಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಸರಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪನೆಗೆ ಕಾರಣರಾಗಿ ಸ್ಥಾಪಕಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸರಳ- ಸಜ್ಜನಿಕೆಯ ವ್ಯಕ್ತಿತ್ವದೊಂದಿಗೆ ಜನಾನುರಾಗಿಯಾಗಿದ್ದರು. ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್, ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಮಣಿನಾಲ್ಕೂರು ಸಿಎ ಬ್ಯಾಂಕ್ ಸಿಇಒ ಸುಧಾಕರ ಶೆಟ್ಟಿ ಹೆಗ್ಗಡೆಕೋಡಿ ಸೇರಿದಂತೆ ಹಲವು ಗಣ್ಯರು ಮೃತರ‌ ಅಂತಿಮ ದರ್ಶನ ಪಡೆದರು. ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!