ಮೂಡುಬಿದಿರೆ: ನಿರುದ್ಯೋಗಿಗಳಿಗೆ ಕೃಷಿ ತರಬೇತಿ, ಗೌರವಧನ ನೀಡಿ ಕೃಷಿ ಮಾಡಲು ಭೂಮಿಯನ್ನು ಒದಗಿಸಬೇಕು. ಅದು ದೇಶದ ಆಹಾರ ಮತ್ತು ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರವಾಗಲಿದೆ ಎಂದು ಮೂಡುಬಿದಿರೆ ಜೈನ ಮಠದ ಸ್ವಾಮೀಜಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಹಲಸು-ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ಹಮ್ಮಿಕೊಳ್ಳಲಾದ ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಸಮೃದ್ಧಿಯನ್ನು ಮೋಹಿನಿ ಅಪ್ಪಾಜಿ ನಾಯ್ಕ್ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಹಲಸು ಹಣ್ಣುಗಳ ರಾಜ, ಬಡವರಿಗೆ ಹಲಸೇ ಕಲ್ಪವೃಕ್ಷ. ಹಲಸಿನ ಖಾದ್ಯಗಳು ತುಳುನಾಡಿನ ವೈಶಿಷ್ಟö್ಯವಾಗಿವೆ. ದೇಶಿ ಹಣ್ಣು ಹಂಪಲು ರುಚಿಕರ ಮಾತ್ರವಲ್ಲ ಆರೋಗ್ಯಕರ. ಸಾತ್ವಿಕ ಆಹಾರಗಳು ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, ನಾವು ಏನೇ ಕೆಲಸ ಮಾಡಿದರೂ, ಸಮಾಜ ಮತ್ತು ಭವಿಷ್ಯದ ದೃಷ್ಟಿಯಿದ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಪರಿಕಲ್ಪನೆಯ ಸಮೃದ್ಧಿಮೇಳವನ್ನು ಹಮ್ಮಿಕೊಳ್ಳಲಾಗಿದೆ. ಡಾ.ಎಲ್.ಸಿ. ಸೋನ್ಸ್ ಅವರ ಹೆಸರು ಚಿರಸ್ಥಾಯಿ ಮಾಡುವುದು ನಮ್ಮೆಲ್ಲರ ಆಶಯ ಎಂದರು. ಡಾ.ಎಲ್.ಸಿಸೋನ್ಸ್ ಅವರ ಪತ್ನಿ ಬೆನಿಟಾ ಸೋನ್ಸ್, ಉದ್ಯಮಿ ಕೆ.ಶ್ರೀಪತಿ ಭಟ್, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಬ್ಯಾಂಕ್‌ನ ವಿಶೇಷ ಕರ್ತವ್ಯ ಅಧಿಕಾರಿ ಚಂದ್ರಶೇಖರ್ ಎಂ., ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ಮಹಾಬಲ ಕುಲಾಲ್, ಧನಕೀರ್ತಿ ಬಲಿಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಸತೀಶ್, ಬ್ರಹ್ಮಾವರ ಕೆವಿಕೆ ಮುಖ್ಯಸ್ಥ ಡಾ.ಬಿ ಧನಂಜಯ, ಹಿರಿಯ ಕೃಷಿ ವಿಜ್ಞಾನಿ ರವಿರಾಜ್ ಶೆಟ್ಟಿ, ಕೃಷಿ ಸಲಹಾ ಸಮಿತಿ ಸದಸ್ಯ ರಾಜವರ್ಮ ಬೈಲಂಗಡಿ, ತುಳುಕೂಟ ಅಧ್ಯಕ್ಷ ಧನಕೀರ್ತಿ ಬಲಿಪ, ಮಂಗಳೂರು ಕೆವಿಕೆ ಮಾಜಿ ಮುಖ್ಯಸ್ಥ ಸುಭಾಶ್ಚಂದ್ರ ಚೌಟ ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. -ಇಂದು ವಿಚಾರ ಸಂಕಿರಣ, ಸಂವಾದಜುಲೈ 15 ರಂದು 10 ಗಂಟೆಗೆ ಹಣ್ಣು ಮತ್ತು ತರಕಾರಿಗಳ ಮೌಲ್ಯವರ್ಧನೆ ಮತ್ತು ಸಂರಕ್ಷಣೆ ಕುರಿತು ವಿಚಾರ ಸಂಕಿರಣ ನಡೆಯಲಿದ್ದು ಕೊಪ್ಪದ ಪ್ರಗತಿಪರ ಕೃಷಿ ಉತ್ಪನ್ನ ತರಬೇತುದರರಾದ ಸುಮಾ ರಂಗಪ್ಪ ಮಾಹಿತಿ ನೀಡುವರು. 11 ಗಂಟೆಗೆ ಸಖರಾಯಪಟ್ಟಣದ ಹಲಸಿನ ಹಣ್ಣಿನ ಉತ್ಪನ್ನಗಳ ತರಬೇತುದಾರ ಶಿವಣ್ಣ ಹಲಸಿನ ಹಣ್ಣಿನ ಮೌಲವರ್ಧನೆ ಹಾಗೂ ಸಂರಕ್ಷಣೆಯ ವಿಧಾನಗಳ ಕುರಿತು ಉಪನ್ಯಾಸ ನೀಡುವರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…