ಕರಾವಳಿ

ಮೂಡುಬಿದಿರೆ: ಹಲವು-ಹಣ್ಣುಗಳ ಮೇಳಕ್ಕೆ ಚಾಲನೆ

ಮೂಡುಬಿದಿರೆ: ನಿರುದ್ಯೋಗಿಗಳಿಗೆ ಕೃಷಿ ತರಬೇತಿ, ಗೌರವಧನ ನೀಡಿ ಕೃಷಿ ಮಾಡಲು ಭೂಮಿಯನ್ನು ಒದಗಿಸಬೇಕು. ಅದು ದೇಶದ ಆಹಾರ ಮತ್ತು ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರವಾಗಲಿದೆ ಎಂದು ಮೂಡುಬಿದಿರೆ ಜೈನ ಮಠದ ಸ್ವಾಮೀಜಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಹಲಸು-ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ಹಮ್ಮಿಕೊಳ್ಳಲಾದ ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಸಮೃದ್ಧಿಯನ್ನು ಮೋಹಿನಿ ಅಪ್ಪಾಜಿ ನಾಯ್ಕ್ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಹಲಸು ಹಣ್ಣುಗಳ ರಾಜ, ಬಡವರಿಗೆ ಹಲಸೇ ಕಲ್ಪವೃಕ್ಷ. ಹಲಸಿನ ಖಾದ್ಯಗಳು ತುಳುನಾಡಿನ ವೈಶಿಷ್ಟö್ಯವಾಗಿವೆ. ದೇಶಿ ಹಣ್ಣು ಹಂಪಲು ರುಚಿಕರ ಮಾತ್ರವಲ್ಲ ಆರೋಗ್ಯಕರ. ಸಾತ್ವಿಕ ಆಹಾರಗಳು ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, ನಾವು ಏನೇ ಕೆಲಸ ಮಾಡಿದರೂ, ಸಮಾಜ ಮತ್ತು ಭವಿಷ್ಯದ ದೃಷ್ಟಿಯಿದ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಪರಿಕಲ್ಪನೆಯ ಸಮೃದ್ಧಿಮೇಳವನ್ನು ಹಮ್ಮಿಕೊಳ್ಳಲಾಗಿದೆ. ಡಾ.ಎಲ್.ಸಿ. ಸೋನ್ಸ್ ಅವರ ಹೆಸರು ಚಿರಸ್ಥಾಯಿ ಮಾಡುವುದು ನಮ್ಮೆಲ್ಲರ ಆಶಯ ಎಂದರು. ಡಾ.ಎಲ್.ಸಿಸೋನ್ಸ್ ಅವರ ಪತ್ನಿ ಬೆನಿಟಾ ಸೋನ್ಸ್, ಉದ್ಯಮಿ ಕೆ.ಶ್ರೀಪತಿ ಭಟ್, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಬ್ಯಾಂಕ್‌ನ ವಿಶೇಷ ಕರ್ತವ್ಯ ಅಧಿಕಾರಿ ಚಂದ್ರಶೇಖರ್ ಎಂ., ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ಮಹಾಬಲ ಕುಲಾಲ್, ಧನಕೀರ್ತಿ ಬಲಿಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಸತೀಶ್, ಬ್ರಹ್ಮಾವರ ಕೆವಿಕೆ ಮುಖ್ಯಸ್ಥ ಡಾ.ಬಿ ಧನಂಜಯ, ಹಿರಿಯ ಕೃಷಿ ವಿಜ್ಞಾನಿ ರವಿರಾಜ್ ಶೆಟ್ಟಿ, ಕೃಷಿ ಸಲಹಾ ಸಮಿತಿ ಸದಸ್ಯ ರಾಜವರ್ಮ ಬೈಲಂಗಡಿ, ತುಳುಕೂಟ ಅಧ್ಯಕ್ಷ ಧನಕೀರ್ತಿ ಬಲಿಪ, ಮಂಗಳೂರು ಕೆವಿಕೆ ಮಾಜಿ ಮುಖ್ಯಸ್ಥ ಸುಭಾಶ್ಚಂದ್ರ ಚೌಟ ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. -ಇಂದು ವಿಚಾರ ಸಂಕಿರಣ, ಸಂವಾದಜುಲೈ 15 ರಂದು 10 ಗಂಟೆಗೆ ಹಣ್ಣು ಮತ್ತು ತರಕಾರಿಗಳ ಮೌಲ್ಯವರ್ಧನೆ ಮತ್ತು ಸಂರಕ್ಷಣೆ ಕುರಿತು ವಿಚಾರ ಸಂಕಿರಣ ನಡೆಯಲಿದ್ದು ಕೊಪ್ಪದ ಪ್ರಗತಿಪರ ಕೃಷಿ ಉತ್ಪನ್ನ ತರಬೇತುದರರಾದ ಸುಮಾ ರಂಗಪ್ಪ ಮಾಹಿತಿ ನೀಡುವರು. 11 ಗಂಟೆಗೆ ಸಖರಾಯಪಟ್ಟಣದ ಹಲಸಿನ ಹಣ್ಣಿನ ಉತ್ಪನ್ನಗಳ ತರಬೇತುದಾರ ಶಿವಣ್ಣ ಹಲಸಿನ ಹಣ್ಣಿನ ಮೌಲವರ್ಧನೆ ಹಾಗೂ ಸಂರಕ್ಷಣೆಯ ವಿಧಾನಗಳ ಕುರಿತು ಉಪನ್ಯಾಸ ನೀಡುವರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

22 hours ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

22 hours ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

22 hours ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

22 hours ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

22 hours ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

1 day ago