ಕರಾವಳಿ

ಮಂಗಳೂರಿನಲ್ಲಿ ಮಿಶ್ರ ಮೀನುಗಾರಿಕೆ ಬಗ್ಗೆ ತರಬೇತಿ

ದಕ್ಷಿಣ ಕನ್ನಡ :ಮಿಶ್ರ ಮೀನುಸಾಕಣೆ ಪದ್ಧತಿಗಳು ಕುರಿತು ತರಬೇತಿ ಕಾರ್ಯಕ್ರಮವು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ , ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ, ಮತ್ತು ವಿಸ್ತರಣಾ ವಿಭಾಗ, ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರು ಇಲ್ಲಿ ಮಿಶ್ರ ಮೀನುಸಾಕಣೆ ಪದ್ಧತಿಗಳ ಕುರಿತು 3 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ 26 ರಂದು ಆರಂಭಗೊಂಡಿತು.


ಭಾರತ ದೇಶದಲ್ಲಿ ಮೀನು ಸಂಪನ್ಮೂಲವು ಹೇರಳವಾಗಿದ್ದು, ಮೀನು ಕೃಷಿಕರ ಆರ್ಥಿಕ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವು ಸಹಕಾರಿಯಾಗಲಿದೆ ಎಂದು ಮುಖ್ಯ ಅತಿಥಿಗಳಾದ ಸಿದ್ಧಯ್ಯ ಡಿ. ಜಂಟಿ ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಮಂಗಳೂರು ಇವರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಡಾ. ಎಸ್. ಎಂ. ಶಿವಪ್ರಕಾಶ್, ವಿಶ್ರಾಂತ ವಿಸ್ತರಣಾ ನಿರ್ದೇಶಕರು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಅವರು ಶಿಭಿರಾರ್ಥಿಗಳಿಗೆ ಮೀನಿನ ಮಾರುಕಟ್ಟೆ ವ್ಯವಸ್ಥೆ ಕುರಿತು ಕಿರು ಪರಿಚಯ ನೀಡಿದರು.
ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ರವರಾದ ಡಾ. ಹೆಚ್.ಏನ್. ಆಂಜನೇಯಪ್ಪರವರು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಸಂಯೋಜಕರಾದ ಡಾ. ಎಸ್. ಆರ್. ಸೋಮಶೇಖರ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಕಾರ್ಯಕ್ರಮದ ನಿರೂಪಕಿಯಾದ ಶ್ರೀಮತಿ ವಂದನಾ ಕೆ. ಅವರು ಮೀನುಕೃಷಿಕರು ಈ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಿಕೊಂಡರು. ಡಾ. ಅಮೋಘ ಕೆ.ಆರ್. ಅವರು ಧನ್ಯವಾದ ಅರ್ಪಿಸಿದರು. ಈ ಕಾರ್ಯಕ್ರಮವು ನುರಿತ ಮೀನುಗಾರಿಕಾ ಸಂಪನ್ಮೂಲ ವ್ಯಕ್ತಿಗಳು, ಮೂಡುಬಿದಿರೆಯ ದೇವರಾಜ್ ಕೋಟ್ಯಾನ್ ಮತ್ತು ರಾಜೇಶ್ ಕೋಟ್ಯಾನ್ ಇವರ ಸಮಗ್ರ ಕೃಷಿ ಪದ್ಧತಿ ಕ್ಷೇತ್ರ ವೀಕ್ಷಣೆಯನ್ನು ಒಳಗೊಂಡಿದ್ದು ಯಶಸ್ವಿಯಾಗಿ ಮೂರು ದಿನಗಳು ಕಾಲ ಪೂರೈಸಿ 28ರಂದು ಮುಕ್ತಾಯವಾಯಿತು.
ವಂದನಾರ್ಪಣ ಕಾರ್ಯಕ್ರಮದಲ್ಲಿ ಮಹೇಶ್ ಕುಮಾರ್, ಜನರಲ್ ಮ್ಯಾನೇಜರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ, ಮಂಗಳೂರು, ಡಾ ದೇವಿಪ್ರಸಾದ್, ಅಧ್ಯಕ್ಷರು,ರಾಜ್ಯ ಮೀನು ಕೃಷಿಕರ ಸಂಘ ಹಾಗೂ ಡಾ.ಟಿ.ಜೆ.ರಮೇಶ, ಹಿರಿಯ ವಿಜ್ಞಾನಗಳು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರುಗಳು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

12 hours ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

12 hours ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

12 hours ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

12 hours ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

12 hours ago

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…

12 hours ago