ಬಂಟ್ವಾಳ:ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ವೀರಕಂಬ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ (47) ಮೃತಪಟ್ಟವರಾಗಿದ್ದಾರೆ.ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.
ಅ ಬಳಿಕ ಇವರು ಇಲಾಖೆಯೊಳಗೆ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.
ಬೆಳಿಗ್ಗೆ ಸುಮಾರು 8.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಜಯರಾಮ ಅವರು ಕಿಟಕಿ ಬಾಗಿಲು ತೆರದು ನೋಡಿದಾಗ ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.ಬಾಗಿಲಿನ ಚಿಲಕ ಮುರಿದು ಒಳಗೆ ಹೋಗಿ ನೋಡಿದಾಗ ಇವರು ಅದಾಗಲೇ ಮೃತಪಟ್ಟ ಬಗ್ಗೆ ಮೇಲ್ನೋಟಕ್ಕೆ ಕಂಡುಬಂದಿದೆಯಾದರೂ, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ,ಪರೀಕ್ಷೆ ನಡೆಸಿದಾಗ ಅವರು ಮೃತಪಟ್ಟ ಬಗ್ಗೆ ಇಲ್ಲಿನ ವೈದ್ಯರು ತಿಳಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅವರು ತಾಯಿ ಹಾಗೂ ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…