ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವದ ಪ್ರಯುಕ್ತ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ , ದೀಪ ಪ್ರಜ್ವಲನೆ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಲಕ್ಷ ಕುಂಕುಮಾರ್ಚನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಾರ್ವಜನಿಕ ಶನಿ ಪೂಜೆ ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು
ರಾತ್ರಿ ದೀಪೋತ್ಸವ ಹಾಗೂ ಶ್ರೀ ದೇವರ ಉತ್ಸವ ಬಲಿ ನಡೆಯಿತು
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಗೋಪಾಲಕೃಷ್ಣ ಉಪಾಧ್ಯಾಯ
ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು , ಅಕೌಂಟೆಟ್ ಶಿವಶಂಕರ್ ಭಕ್ತಾದಿಗಳು ಉಪಸ್ಥಿತರಿದ್ದರು
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…