ಉಡುಪಿ: ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆ ಉದ್ಯಾವರದಲ್ಲಿ ಸಂಭವಿಸಿದೆ.
ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನವೆಂಬರ್ 28ರಂದು ನಿಧನ ಹೊಂದಿದ್ದರು. ಇವರ ಪತಿ ಉದ್ಯಾವರ ಗ್ರಾ.ಪಂ. ಹಾಲಿ ಸದಸ್ಯ ಲಾರೆನ್ಸ್ ಡೇಸಾ (62)ಅವರು ಅಸೌಖ್ಯದಿಂದ ನವೆಂಬರ್ 29ರಂದು ನಿಧನ ಹೊಂದಿದ್ದಾರೆ.
ಉದ್ಯಾವರ ಸಂತ ಫ್ರಾನ್ಸಿಸ್ ಕ್ಷೇವಿಯರ್ ದೇವಾಲಯದ ಪಾಲನ ಮಂಡಳಿಯಲ್ಲಿ ಮೂರು ಬಾರಿ ಉಪಾಧ್ಯಕ್ಷ, ವಾರ್ಡ್ ನ ಗುರಿಕಾರರಾಗಿದ್ದ ಮೃತರು ಉದ್ಯಾವರ ಬೋಳಾರಗುಡ್ಡೆ ಕಲಾಯಿಬೈಲ್ ನಿವಾಸಿ. ಉದ್ಯಾವರ ಮಂಡಲ ಪಂಚಾಯತ್ ಸದಸ್ಯರಾಗಿ, ಒಂದು ಅವಧಿಯಲ್ಲಿ ಉದ್ಯಾವರ ಗ್ರಾ.ಪಂ. ಉಪಾಧ್ಯಕ್ಷರಾಗಿ ಸುದೀರ್ಘ ಸುಮಾರು ಮೂರು ದಶಕಗಳ ಕಾಲ ಗ್ರಾ.ಪಂ. ಸದಸ್ಯರಾಗಿ ಸಮಾಜಮುಖೀ ಸೇವೆಯನ್ನು ಸಲ್ಲಿಸಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…