ಜನ ಮನದ ನಾಡಿ ಮಿಡಿತ

Advertisement

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೋಲೀಸರ ವಶ..!

ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಹಲ್ಲೆ ‌ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಕಾವಳಪಡೂರು ಗ್ರಾಮದ ಮದ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂಬಾತನನ್ನು ಬಂಧಿಸಲಾಗಿದೆ.
2012 ರ ಇಸವಿಯಲ್ಲಿ ಕಾವಳಕಟ್ಟೆ ಎಂಬಲ್ಲಿನ ಮನೆಯೊಂದರಲ್ಲಿ ನಡೆಯುತ್ತಿರುವ ಜ್ಯೋತಿಷ್ಯ ಶಾಸ್ತ್ರದ ವಿಚಾರದಲ್ಲಿ ವಿವಾದ ಉಂಟಾದ ಪರಿಣಾಮ ಮನೆಗೆ ನುಗ್ಗಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಪೊಲೀಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್, ಮೂರ್ತಿ, ಹಾಗೂ ಲೋಲಾಕ್ಷ ಅವರ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ಗಣೇಶ್ ಪ್ರಸಾದ್, ಪಿ.ಸಿ.ಪ್ರವೀಣ್, ಶಿದ್ದಪ್ಪ, ಶಿವಾನಂದ ಮಡ್ಡಿ, ನಾಗರಾಜ್ ಅವರ ಮಾಹಿತಿ ಸಂಗ್ರಹಿಸಿ ಬೆಳ್ತಂಗಡಿಯಲ್ಲಿ ವಶಕ್ಕೆ ಪಡೆದುಕೊಂಡು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!