ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾವಳಪಡೂರು ಗ್ರಾಮದ ಮದ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂಬಾತನನ್ನು ಬಂಧಿಸಲಾಗಿದೆ.
2012 ರ ಇಸವಿಯಲ್ಲಿ ಕಾವಳಕಟ್ಟೆ ಎಂಬಲ್ಲಿನ ಮನೆಯೊಂದರಲ್ಲಿ ನಡೆಯುತ್ತಿರುವ ಜ್ಯೋತಿಷ್ಯ ಶಾಸ್ತ್ರದ ವಿಚಾರದಲ್ಲಿ ವಿವಾದ ಉಂಟಾದ ಪರಿಣಾಮ ಮನೆಗೆ ನುಗ್ಗಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಪೊಲೀಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್, ಮೂರ್ತಿ, ಹಾಗೂ ಲೋಲಾಕ್ಷ ಅವರ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ಗಣೇಶ್ ಪ್ರಸಾದ್, ಪಿ.ಸಿ.ಪ್ರವೀಣ್, ಶಿದ್ದಪ್ಪ, ಶಿವಾನಂದ ಮಡ್ಡಿ, ನಾಗರಾಜ್ ಅವರ ಮಾಹಿತಿ ಸಂಗ್ರಹಿಸಿ ಬೆಳ್ತಂಗಡಿಯಲ್ಲಿ ವಶಕ್ಕೆ ಪಡೆದುಕೊಂಡು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…