ಕರಾವಳಿ

ಚೇರ್ಕಾಡಿ: 2025ರ ಮೇಯಿಂದ ರಾಷ್ಟ್ರೋತ್ಥಾನ ಪರಿಷತ್ ನ ಸಿಬಿಎಸ್ಇ ಶಾಲೆ ಆರಂಭ

ಉಡುಪಿ: ರಾಷ್ಟ್ರೋತ್ಥಾನ ಪರಿಷತ್ ಗೆ 60 ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಇದರ ಭಾಗವಾಗಿ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ ನೂತನ ಶಾಲೆ 2025ರ ಮೇ ಯಿಂದ ಕಾರ್ಯಾರಂಭವಾಗಲಿದೆ ಎಂದು ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾರಾವಿ ದಿನೇಶ್ ಹೆಗ್ಡೆ ಹೇಳಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ 9 ಜಿಲ್ಲೆಗಳಲ್ಲಿ ರಾಷ್ಟ್ರೋತ್ಥಾನ ಪರಿಷತ್ ನ 14 ಸಿಬಿಎಸ್ಇ ಶಾಲೆಗಳಲ್ಲಿ 15 ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮುಂದೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆ ಇದೆ ಎಂದರು.
ಚೇರ್ಕಾಡಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 8 ನೇ ತರಗತಿಯವರೆಗೆ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮುಂದಿನ ವರ್ಷ ಎಪ್ರಿಲ್ 30 ರಂದು ಶಾಲಾ ಕಟ್ಟಡ ಉದ್ಘಾಟನೆಗೊಳ್ಳಲಿದ್ದು, ಮೇ ತಿಂಗಳಿನಿಂದ ಶಾಲೆ ಕಾರ್ಯಾರಂಭವಾಗಲಿದೆ. ಹುಡುಗ/ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸ್ಥಾನೀಯ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಕಾರ್ಯದರ್ಶಿ ಋಷಿ ರಾಜ್, ರವಿ ಕುಮಾರ್, ಪ್ರಾಂಶುಪಾಲೆ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

22 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

4 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

5 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

7 days ago