ಜನ ಮನದ ನಾಡಿ ಮಿಡಿತ

Advertisement

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ; ಡಿ.2ರಂದು ಪ್ರತಿಭಟನೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ಥಿಯಾಗಿ ವಾಹಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಡಿ.2ರ ಬೆಳಗ್ಗೆ 10 ಗಂಟೆಗೆ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ಎಂಬಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮತ್ತು ಲೋಕೋಪಯೋಗಿ ಇಲಾಖೆಗೆ ಬಿಸಿ ಮುಟ್ಟಿಸುವ ಕಾರ್ಯ ನಡೆಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಜನ ಸಾಮಾನ್ಯರು ನಡೆದಾಡಲೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದ

ರೂ ಲೋಕೋಪಯೋಗಿ ಇಲಾಖೆಯಾಗಲಿ, ಸರಕಾರವಾಗಲಿ ಈ ಕುರಿತು ಗಮನ ಹರಿಸದೆ ಇದ್ದ ಕಾರಣ ರಸ್ತೆಯ ಪರಿಸ್ಥಿತಿ ಶೋಚನೀಯವಾಗಿದೆ. ಇದರ ವಿರುದ್ಧ ಸಾರ್ವಜನಿಕರು ರಸ್ತೆಗಿಳಿದು ಹೋರಾಟ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆಗೆ ತಕ್ಷಣವೇ ಡಾಮರೀಕರಣ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು. ಈ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯಲ್ಲಿ ವಾಹನಗಳ ಚಾಲಕ-ಮಾಲಕರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಕೈಜೋಡಿಸಬೇಕು. ಮಾತ್ರವಲ್ಲದೆ, ಈ ಮೂಲಕ ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಆಗ್ರಹಿಸಬೇಕು ಎಂದು ಅವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!