ನೈಜೀರಿಯದ ಉತ್ತರ ಭಾಗದಲ್ಲಿ ಸಂಭವಿಸಿದ ಬೋಟ್ ಅಪಘಾತದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ನೈಜೀರಿಯದ ಕೋಗಿ ರಾಜ್ಯದಿಂದ ಹೊರಟ ಬೋಟ್, ನೈಜರ್ ನದಿಯಲ್ಲಿ ಮುಳುಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೋಟ್‌ನಲ್ಲಿ ಸುಮಾರು 200 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ವೇಳೆಗೆ 27 ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದು, ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಸ್ಥಳೀಯ ಸ್ಕೂಬಾ ತಜ್ಞರು ಮತ್ತು ಸೇನಾಬಲದ ಸಿಬ್ಬಂದಿ ಸೇರಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಕೋಗಿಯ ರಕ್ಷಣಾ ಪ್ರತಿನಿಧಿ ತಿಳಿಸಿದ್ದಾರೆ. ಘಟನೆ ಸಂಭವಿಸಿದ 12 ಗಂಟೆಗೂ ಹೆಚ್ಚಿನ ಸಮಯದಲ್ಲಿ ಯಾವುದೇ ಪ್ರಯಾಣಿಕರನ್ನು ಜೀವಿತಾವಸ್ಥೆಯಲ್ಲಿ ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಗಾಯಾಳುಗಳಲ್ಲಿ ಬಹುಮಟ್ಟಿಗೆ ಮಹಿಳೆಯರೇ ಇದ್ದು, ಮತ್ತು ಅವರಲ್ಲಿ ಕೆಲವರು ಮಾರ್ಕೆಟಿಗೆ ಹೋಗುತ್ತಿದ್ದವರು ಎಂದು ವರದಿಯಾಗಿದೆ.
ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿರುವುದು ಮತ್ತು ಬೋಟ್ ನಿರ್ವಹಣೆ ಕೊರತೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಮುಳುಗಿದ ಬೋಟನ್ನು ಹುಡುಕಲು ತಡವಾದ ಕಾರಣ ಸಾವಿನ ಸಂಖ್ಯೆ ಹೆಚ್ಚಾಯಿತು ಎಂದು ವಿಶ್ಲೇಷಣೆ ಮಾಡಲಾಗಿದೆ.
ನೈಜೀರಿಯಾ ಭಾಗದಲ್ಲಿ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಜನರು ಹೆಚ್ಚಾಗಿ ಜಲ ಸಾರಿಗೆಯನ್ನು ಬಳಸುತ್ತಿದ್ದು, ಹೀಗಾಗಿ ಅಲ್ಲಿ ಬೋಟ್ ಅಪಘಾತಗಳು ಸಾಮಾನ್ಯವಾಗುತ್ತಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…