ಉಡುಪಿ: ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶಂಕರನಾರಾಯಣ ಠಾಣಾ ವ್ಯಾಪ್ತಿಯ ಬೆಳ್ವೆ ಸಮೀಪದ ಗುಮ್ಮಲ ಎಂಬಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ (13) ಹಾಗೂ ಜಯಂತ್ (19) ಎಂದು ಗುರುತಿಸಲಾಗಿದೆ. ಶ್ರೀಶ ಹೆಬ್ರಿಯ ಎಸ್‌ಆರ್‌ಎಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು.
ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ ಮನೆ ಸಮೀಪದ ಡ್ಯಾಂಗೆ ಈಜಲು ಹೋಗಿದ್ದರು. ಈ ವೇಳೆ ಶ್ರೀಶ ಹಾಗೂ ಜಯಂತ್ ಅಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸ್ಥಳಕ್ಕೆ ಶಂಕರ ನಾರಾಯಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…