ಇತರೆ

ಪ್ರೊಬೇಷನರಿ ಐಪಿಎಸ್ ಅಧಿಕಾರಿಯ ಶ್ರಮ ಫಲಿಸುವ ಹೊತ್ತಲ್ಲಿ ಬಂದ ಜವರಾಯ

ಪ್ರೊಬೇಷನರಿ ಐಪಿಎಸ್ ಅಧಿಕಾರಿಯ ಶ್ರಮ ಫಲಿಸುವ ಹೊತ್ತಲ್ಲಿ ಬಂದ ಜವರಾಯ


ಹಾಸನ : ಹಾಸನ-ಮೈಸೂರು ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಕಿತ್ತಾನಿ ಗಡಿ ಬಳಿ ನಡೆದಿದೆ.
ಐಪಿಎಸ್ ಅಧಿಕಾರಿಯನ್ನು ಹರ್ಷಬರ್ಧನ್ ಎಂದು ಗುರ್ತಿಸಲಾಗಿದ್ದು, ಮಧ್ಯ ಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಇವರು ಪ್ರೊಬೇಷನರಿ ಎಎಸ್ಪಿಯಾಗಿ ಮೊದಲ ದಿನ ಕರ್ತವ್ಯಕ್ಕೆ ಹಾಜರಾಗಲು ಹಾಸನಕ್ಕೆ ತೆರಳುವ ವೇಳೆ ಘಟನೆ ನಡೆದಿದ್ದು, ಜನರಲ್ಲಿ ಬೇಸರ ಮೂಡಿಸಿದೆ. ದಾರಿ ಮಧ್ಯೆ ಕಿತ್ತಾಡಿ ಗಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ವಾಹನ ರಸ್ತೆ ಪಕ್ಕದ ಮನೆಗೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಎಎಸ್ಪಿ ಭಾನುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಾಲಕ ಕಾನ್ಸ್ಟೇಬಲ್ ಮಂಜೇಗೌಡರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯ ಮಂತ್ರಿ ಸೇರಿ ಹಲವು ಗಣ್ಯರ ಸಂತಾಪ
ಈ ದುರ್ಘಟನೆಯ ಸುದ್ದಿ ತಿಳಿದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ ‘ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು.’ ಎಂದು ಎಕ್ಸ್ ನಲ್ಲಿ ಪೋಸ್ಟ್ ಹಂಚಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

20 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

4 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

5 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

7 days ago