ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಪರ್ಲಡ್ಕದ ಯುವಕ ನಾಪತ್ತೆ-ಪುತ್ತೂರು ನಗರ ಠಾಣೆಯಲ್ಲಿ ದೂರು.

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್‌, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್‌ ಸಹಿತ ಆತ ನಾಪತ್ತೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಲೋಕೇಂದರ್ ಸಿಂಗ್ ತಂದೆ ರತನ್ ಸಿಂಗ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕ ಸುಮಾರು 6 ಅಡಿ ಉದ್ದ, ಗೋದಿ ಮೈಬಣ್ಣ, ಉದ್ದನೆಯ ಕೂದಲು, ಗಡ್ಡಮೀಸೆ ಹೊಂದಿದ್ದು ಕನ್ನಡಕ ಧರಿಸಿರುತ್ತಾನೆ. ಕನ್ನಡ, ಹಿಂದಿ, ಇಂಗ್ಲಿಷ್, ಮಾರ್ವಾಡಿ ಭಾಷೆ ಬಲ್ಲವನಾಗಿದ್ದು ಆತನ ಗುರುತು ಪತ್ತೆಯಾದಲ್ಲಿ ನಗರ ಠಾಣೆಗೆ ಮಾಹಿತಿ ನೀಡುಂತೆ ಪೊಲೀಸ್‌ ಠಾಣೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!