ಕರಾವಳಿ

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಯಶ್ ಪಾಲ್ ಸುವರ್ಣ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದರು.

 


ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು, ಶತಮಾನೋತ್ಸವ ಆಚರಣೆಯ ಸಂಭ್ರಮದಲ್ಲಿರುವ ಶಾಲೆಯ ಶಿಕ್ಷಕರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಮನವಿಯ ಮೇರೆಗೆ 2 ಕೊಠಡಿಗಳನ್ನು 20 ಲಕ್ಷ ವೆಚ್ಚದಲ್ಲಿ ಶಾಸಕರ ನಿಧಿ ಹಾಗೂ ದಾನಿಗಳ ಸಹಕಾರದಿಂದ ಶೀಘ್ರದಲ್ಲಿ ನಿರ್ಮಾಣಗೊಳ್ಳಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಆದ್ಯತೆಯೊಂದಿಗೆ ಸದಾ ಸಹಕಾರ ನೀಡುವ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶತಮಾನೋತ್ಸವ ಸಂಭ್ರಮದ ವಿಜ್ಞಾಪನೆ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮದ ಅಧ್ಯಕ್ಷರಾದ ಸಂತೋಷ್ ಜತ್ತನ್ , ದಾನಿಗಳಾದ ನ್ಯೂ ಕರ್ನಾಟಕ ಬಿಲ್ಡರ್ಸ್ ನ ಚೇತನ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸದಾನಂದ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುಳಾ ಜಯಕರ್, ಹೇರೂರು ಎಜುಕೇಷನ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ದೀಪಾ ಚೇತನ್ ಕುಮಾರ್ ಶೆಟ್ಟಿ, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಚಂದ್ರಕಲಾ , ಶತಮಾನೋತ್ಸವ ಸಂಭ್ರಮದ ಕಾರ್ಯದರ್ಶಿ ಅಶೋಕ್ ಹೇರೂರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಶೋಕ್ ಅಮೀನ್, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕಾಮತ್, ಮೀರಾ ಸದಾನಂದ, ಹೇಮ ಅಶೋಕ್, ಆನಂದ ಪೂಜಾರಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ್ ಕುಲಾಲ್, ಸಚಿನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

3 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

3 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

3 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

23 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

1 day ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

1 day ago