ಬಂಟ್ವಾಳ: ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ತಮ್ಮ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು. ಪ್ರಸ್ತುತ ಅರ್ಜಿ ಹಾಕಿರುವ ೧೨೬ ಮಂದಿಯ ಪೈಕಿ ಸರಕಾರದ ಗುರಿಯಂತೆ ೩೬ ಮಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿ ಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್, ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ, ಮುರಳಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…