ಮಂಗಳೂರಿನ ಬೆಂಗ್ರೆ ಪರಿಸರದಲ್ಲಿ 1994 ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿದರು.
ಹಕ್ಕುಪತ್ರ ವಿತರಣೆಯಲ್ಲಿ ಇಲ್ಲ ಸಲ್ಲದ ಗೊಂದಲಗಳಿಂದ ವಿಳಂಬ ನೀತಿ ಅನುಸರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು, ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಕೂಡಲೇ ಜನಪರವಾದ ಧೃಢ ನಿರ್ಣಯ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಆದೇಶ ನೀಡುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು. ಸಭೆಯ ನಂತರ, ಸು
ಮಾರು 40 ವರ್ಷಗಳಿಂದ ಪರಿತಪಿಸುತ್ತಿರುವ ಬೆಂಗ್ರೆ ಪರಿಸರದ ಜನತೆಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗಲಿದೆ ಎಂದು ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳು, ತಹಶಿಲ್ದಾರ್, ಪಾಲಿಕೆ ಆಯುಕ್ತರು, ಕಂದಾಯ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…