ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಥ ಬೀದಿಯಲ್ಲಿ ಭಕ್ತ ಸಾಗರ

 

ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಮಂಜೇಶ್ವರದ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ.


ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕ ಗಳು ದೇವಳದಲ್ಲಿ ನೆರವೇರಿದವು . ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿ ಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.
ಶನಿವಾರ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.

ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!