ಜನ ಮನದ ನಾಡಿ ಮಿಡಿತ

Advertisement

ಕೌಶಲ್ಯ ಮತ್ತು ಮೌಲ್ಯಯುತ ಶಿಕ್ಷಣವು ಸಮಾಜ ಪರಿವರ್ತನೆಗೆ ಅಗತ್ಯ; ಜೆಮ್ ಶಾಲಾ ರಜತಮಹೋತ್ಸವದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್

 

ಬಂಟ್ವಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನವಪೀಳಿಗೆಯು ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಅವರಿಗೆ ಕೌಶಲ್ಯಭರಿತ ಮತ್ತು ಮೌಲ್ಯಯುತವಾದ ಶಿಕ್ಷಣ ನೀಡುವ ಅಗತ್ಯವಿದೆ‌ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಅವರು ಗೋಳ್ತಮಜಲು ಜೆಮ್ ಪಬ್ಲಿಕ್ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು . ಬಡತನ,‌ ನಿರುದ್ಯೋಗ, ಅಸಮಾನತೆ ಇವೇ ಮೊದಲಾದ ಪಿಡುಗುಗಳಿಗೆ ಗುಣಮಟ್ಟದ ಶಿಕ್ಷಣವು ಒಂದು ಅತ್ಯುತ್ತಮ ಪರಿಹಾರ ಕ್ರಮವಾಗಿದ್ದು ಅಂತಹ ಗುಣಮಟ್ಟದ ಶಿಕ್ಷಣವನ್ನು ಕಳೆದ ಇಪ್ಪತ್ತೈದು ವರ್ಷಗಳಿಂದ ನೀಡುತ್ತಾ ಬಂದಿರುವ ಜೆಮ್ ಶಾಲೆಯ ಯಶಸ್ಸಿನ ಹಾದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಳ್ಳಿಹಬ್ಬದ ಪ್ರಯುಕ್ತ ಹೊರತರಲಾದ ರಜತರತ್ನ ಸ್ಮರಣ ಸಂಚಿಕೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿ , ಜೆಮ್ ಶಿಕ್ಷಣ ಸಂಸ್ಥೆಯ ಸ್ಥಾಪಕ ದಿವಂಗತ ಗೋಳ್ತಮಜಲು ಅಬ್ದುಲ್ ಖಾದರ್ ಹಾಜಿಯವರ ಶಿಕ್ಷಣ ಪ್ರೇಮ ಮತ್ತು ಅವರ ಸಾಮಾಜಿಕ ಕಳಕಳಿಯನ್ನು ಸ್ಮರಿಸಿದರು.

ಮೀಫ್ ಸಂಸ್ಥೆಯ ದಕ್ಕಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಜೋಕಟ್ಟೆ , ರಜತ ಮಹೋತ್ಸವದ ಫಲಕವನ್ನು ವೈಜ್ಞಾನಿಕವಾಗಿ ಅನಾವರಣಗೋಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯಾಸೀರ್ ಕಲ್ಲಡ್ಕ ಅವರ ವಸ್ತುಪ್ರಪರ್ಶನವನ್ನು ಉದ್ಘಾಟನೆಯನ್ನು ಉಧ್ಯಮಿ ರೊನಾಲ್ಡ್ ಮಾರ್ಟಿಸ್ ಅವರು‌ ನೆರವೇರಿಸಿದರು. ಫಾತಿಮಾ ಮೆಮೋರಿಯಲ್ ಎಜುಕೇಷನ್ ಟ್ರಸ್ಟಿನ ಅಧ್ಯಕ್ಷ ಅಬೂಬಕ್ಕರ್ ಹಾಜಿ ಗೋಳ್ತಮಜಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ ಪುರುಷೋತ್ತಮ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ. ಜಿ , ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಪದ್ಮನಾಭ ರೈ , ಜಮೀಯ್ಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಕೆ.ಕೆ. ಸಾಹುಲ್ ಹಮೀದ್, ಬಂಟ್ವಾಳ ತಾಲೂಕು ಅಧ್ಯಕ್ಷ ರಶೀದ್ ವಿಟ್ಲ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಾರ್ಯದರ್ಶಿ ನೋಟರಿ ಅಬೂಬಕ್ಕರ್ ವಿಟ್ಲ ಅತಿಥಿಗಳಾಗಿ ಭಾಗವಹಿಸಿದ್ದರು.

ಇದೇ ವೇಳೆ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಮೊಹಮ್ಮದ್ ಹನೀಫ್ ಹಾಜಿ , ರೊನಾಲ್ಡ್ ಮಾರ್ಟಿಸ್, ಮೊಹಮ್ಮದ್ ಯಸೀರ್ ಅವರನ್ನು ಸನ್ಮಾನಿಸಲಾಯಿತು. ಕುದ್ರೋಳಿ ಗಣೇಶ್ ಅವರಿಂದ ಮ್ಯಾಜಿಕ್ ಶೋ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು

ಟ್ರಸ್ಟಿಗಳಾದ ಅಬ್ದುಲ್ ರಝಾಕ್ ಹಾಜಿ , ಮೊಹಮ್ಮದ್ ಶರೀಫ್ ಹಾಜಿ, ಮೊಹಮ್ಮದ್ ಯೂಸುಫ್ ಹಾಜಿ, ಮೊಹಮ್ಮದ್ ಅಲ್ತಾಫ್ ಹಾಜಿ, ಶಾಕಿರ್ ಇಸ್ಮಾಯಿಲ್ ಹಾಜಿ , ಇಮ್ತಿಯಾಝ್ ಅಹಮದ್ ಹಾಜಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹಮೀದ್ ಅಲಿ, ಉಪಾಧ್ಯಕ್ಷೆ ಪುಷ್ಪ ಸತೀಶ್, ಮಾಜಿ ಸಂಚಾಲಕ ಜಿ.ಕೆ. ಅಬ್ದುಲ್ ಹಮೀದ್ ಗೂಡಿನಬಳಿ, ವಿದ್ಯಾರ್ಥಿಗಳ ಸುರಕ್ಷಾ ಸಮಿತಿಯ ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಸ್ಮರಣ ಸಂಚಿಕೆಯ ಕುರಿತು ಮಾತನಾಡಿದರು. ಶಿಕ್ಷಕಿ ನಾಝಿಯಾ ಸ್ವಾಗತಿಸಿದರು. ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಮೊಹಮ್ಮದ್ ಹನೀಫ್ ಹಾಜಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಶಿಕ್ಷಕ ನಿರಂಜನ್ ಡಿ. ಧನ್ಯವಾದಗೈದರು. ಟ್ರಸ್ಟಿ ಅಹಮದ್ ಮುಸ್ಥಾಪಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

error: Content is protected !!