ಬಂಟ್ವಾಳ: ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆಯಾಗಿದ್ದು,ಸಂಶಯಕ್ಕೆ ಕಾರಣವಾಗಿದೆ.
ಕಲ್ಲಡ್ಕ ಅಮ್ಟೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರಕಾಶ್ (40) ನಾಪತ್ತೆಯಾಗಿರುವವರು.
ಕಳೆದ 15 ದಿನಗಳ ಹಿಂದೆಯಷ್ಟೇ ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಅದಕ್ಕೂ ಮೊದಲು ಶಂಭೂರಿನಲ್ಲಿ ವಾಸವಾಗಿದ್ದರು.
ಬಿಸಿರೋಡಿನ ಸೋಮಯಾಜಿ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಇವರು ರಾತ್ರಿ ಸುಮಾರು 7 ಗಂಟೆ ಹೊತ್ತಿಗೆ ಕಲ್ಲಡ್ಕ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಹೋಗಿ ಬರುವುದಾಗಿ ಕಂಪೆನಿಯಲ್ಲಿ ಹೇಳಿ ಹೋದವರು ಮನೆಗೆ ಬರದೆ ಕಾಣೆಯಾಗಿದ್ದಾರೆ. ಬಳಿಕ ಅವರ ಮೊಬೈಲ್
ಸ್ವಿಚ್ ಆಪ್ ಆಗಿರುವುದು ಮನೆಯವರಿಗೆ ಭಯಹುಟ್ಟಿಸಿದ್ಧು,ಇವರ ಪತ್ನಿ
ಜಯಶ್ರೀ ಅವರು ಬಂಟ್ವಾಳ ನಗರ ಪೋಲಿಸ್ ಠಾಣೆಗೆ ಹುಡುಕಿಕೊಡುವಂತೆ ದೂರು ನೀಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…