ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಅನ್ಯಕೋಮಿನ ಯುವಕನಿಂದ ಅತ್ಯಾಚಾರ ಆರೋಪ!!

ಯುವತಿಯೋರ್ವಳಿಗೆ ಸಹಾಯ ಮಾಡಲು ಬಂದ ಅನ್ಯಕೋಮಿನ ಯುವಕ ಆಕೆಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನಲ್ಲಿ‌ ನಡೆದಿದೆ.

ಕಳೆದ ಜುಲೈ 21 ರಂದು ಯುವತಿಯ ಕಾರು ಕದ್ರಿಯಲ್ಲಿ ಕೆಟ್ಟು ನಿಂತಿತ್ತು. ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರ ಮೊಹಮ್ಮದ್ ಶಫಿನ್ ಕಾರನ್ನ ಸರಿಪಡಿಸಿದ್ದ. ಬಳಿಕ ಆಕೆಯನ್ನ ಅದೇ ಕಾರಿನಲ್ಲಿ ಕೊಡಿಯಾಲ್ ಬೈಲ್‌ನ‌ ಆಕೆಯ ಅಪಾರ್ಟ್ ಮೆಂಟ್ ಗೆ ಬಿಟ್ಟು ಬಂದಿದ್ದು ಈ ವೇಳೆ‌ ಆಕೆಯ ಮೊಬೈಲ್ ನಂಬರ್ ಪಡೆದಿದ್ದ. ಯುವತಿ ಅಪಾರ್ಟ್ ಮೆಂಟ್ ನಲ್ಲಿ ಏಕಾಂಗಿಯಾಗಿದ್ದು ಆಗಸ್ಟ್ 1 ರಂದು ಯುವತಿಯ ಮನೆಯ ಫ್ರಿಡ್ಜ್ ಕೆಟ್ಟು ಹೋಗಿದ್ದು ಸಹಾಯಕ್ಕಾಗಿ ಶಫಿನ್ ಗೆ ಕರೆ ಮಾಡಿದ್ದಳು.


ಆತ ರಿಪೇರಿಯವರನ್ನು ಕರೆಸಿ ರಿಪೇರಿ ಮಾಡಿಸಿ ಕಳುಹಿಸಿದ್ದಾನೆ. ಬಳಿಕ ಆಕೆಗೆ ಹಣ್ಣು ಹಾಗೂ ಜ್ಯೂಸ್ ನೀಡಿದ್ದ, ಅದರಲ್ಲಿ ಮತ್ತು ಬರಿಸೋ ವಸ್ತು ಬೆರಸಿದ್ದರಿಂದ ಆಕೆ ಪ್ರಜ್ಞೆ ತಪ್ಪಿದ್ದಳು. ಬಳಿಕ ಆತ ದೈಹಿಕ ಸಂಪರ್ಕ ಬೆಳೆಸಿ,ವೀಡಿಯೋ ಮಾಡಿ ಮುಂದೆಯೂ ಸಹಕಾರ ನೀಡಬೇಕು,ಇಲ್ಲದಿದ್ದಲ್ಲಿ ವೀಡಿಯೋ ವೈರಲ್ ಮಾಡೋ ಬೆದರಿಕೆ ಹಾಕಿದ್ದ. ಬಳಿಕ ಆತನ ಅಣ್ಣ ಮೊಹಮ್ಮದ್ ಶಿಯಾಬ್ ಎಂಬಾತನೂ ಮನೆಗೆ ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದ,ಅಂದು ಆಕೆ ತಪ್ಪಿಸಿಕೊಂಡಿದ್ದು ಮನೆಯಲ್ಲಿದ್ದ 62 ಸಾವಿರ ರೂಪಾಯಿ ಕಳವು ಮಾಡಿದ್ದ. ಬಳಿಕ ಇಬ್ಬರೂ ಸಹೋದರರು ವಿದೇಶಕ್ಕೆ ಪರಾರಿಯಾಗಿದ್ದರು. ಇದೀಗ ಯುವತಿ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!