ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಜ. 4,5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ನಡೆಯುವ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ

ಬಂಟ್ವಾಳ ತಾಲೂಕಿನ ಮಂಚಿ- ಕೊಳ್ಳಾಡು ಸರಕಾರಿ ಪ್ರೌಢಶಾಲೆಯಲ್ಲಿ ಜನವರಿ 4 ಹಾಗೂ 5 ರಂದು ನಡೆಯುವ 23ನೇ ಬಂಟ್ವಾಳ ತಾಲುಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಭಾನುವಾರ ಶಾಲೆಯಲ್ಲಿ ನಡೆದ ಸ್ವಾಗತ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ನಾಳ ಮಾತನಾಡಿ, ಹಿರಿಯ ಸಾಹಿತಿಗಳ, ಪ್ರತಿಭಾನ್ವಿತ ಯುವ ಬರಹಗಾರರ, ಸಾಹಿತ್ಯ ಪ್ರಿಯರೆಲ್ಲರ ಸಾಹಿತ್ಯ ಜಾತ್ರೆಯಾಗಿ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೆರುಗು ನೀಡಲಿದ್ದು, ಕನ್ನಡ ಭಾಷೆಯ ಕೃಷಿಗೆ ಇನ್ನಷ್ಟು ಹೊಸ ರೂಪ ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ‘ಸಾಹಿತ್ಯದಿಂದ ಸಾಮರಸ್ಯ’ ಎನ್ನುವ ಆಶಯದಡಿ ಈ ಸಮ್ಮೇಳನ ನಡೆಯಲಿದೆ ಎಂದರು.

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಆಳ್ವ ಇರಾ ಬಾಳಿಕೆ ಮಾತನಾಡಿ, ಗ್ರಾಮಾಂತರ ಮಂಚಿ ಪ್ರದೇಶವು ಹಲವಾರು ಸಾಹಿತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದೆ. ಮಂಚಿಯ ಇಬ್ಬರು ಸಾಹಿತಿಗಳು ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿಕೊಂಡಿರುವುದು ಆಯೋಜನೆ ಮಾಡುತ್ತಿರುವ ನಮಗೆ ಹೆಮ್ಮೆಯ ಸಂಗತಿ. ಮಂಚಿ-ಕೊಳ್ಳಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಿ ಮೂಡಿ ಬರಲಿ ಎಂದು ಹಾರೈಸಿದರು.

ಹಿರಿಯ ಸಾಹಿತಿ ಹಾಗೂ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪಡಾರು ಮಹಾಬಲೇಶ್ವರ ಭಟ್ ಶುಭ ಹಾರೈಸಿದರು. ಶಾಲಾ ಹಿರಿಯ ವಿದ್ಯಾರ್ಥಿ ಮಾಧವ ಮಾವೆ, ಅಬ್ದುಲ್ ರಝಾಕ್ ಅನಿಸಿಕೆ ವ್ಯಕ್ತಪಡಿಸಿದರು.

ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳಾದ ವಿ ಸು ಭಟ್, ಅಬೂಬಕ್ಕರ್ ಅಮ್ಮುಂಜಿ, ಮಹಮ್ಮದ್ ಪಾಣೆಮಂಗಳೂರು, ಗಣೇಶ ಪ್ರಸಾದ ಪಾಂಡೆಲು, ಸಮಿತಿ ಕೋಶಾಧಿಕಾರಿ ಹಾಜಿ ಸುಲೈಮಾನ್ ಸುರಿಬೈಲು, ಸಂಚಾಲಕರಾದ ಉಮಾನಾಥ ರೈ ಮೇರಾವು, ಬಿ ಎಂ ಅಬ್ಬಾಸ್ ಆಲಿ, ಪುಷ್ಪರಾಜ ಕುಕ್ಕಾಜೆ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಸುಶೀಲ ವಿಟ್ಲ ಮೊದಲಾದವರು ಭಾಗವಹಿಸಿದ್ದರು.

ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ ವಂದಿಸಿದರು. ಬಂಟ್ವಾಳ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!