ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದಿ.ಎಸ್.ಎಂ.ಕೃಷ್ಣ ಅವರಿಗೆ ಸಂತಾಪ ಸೂಚಿಸಿ ಆಡಿದ ಮಾತುಗಳ ಹೈಲೈಟ್ಸ್

ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.‌ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

 

ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು.

ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.

ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!