ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.
ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.
ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.
ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.
ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು.
ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.
ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…