ಬಂಟ್ವಾಳ: ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ( ಬಿ.ಎಂ.ಎಸ್. ಬಂಟ್ವಾಳ ತಾಲೂಕು ಮೋಟಾರ್ & ಜನರಲ್ ಮಜ್ದೂರ್ ಸಂಘ ದ.ಕ.ಇದರ ಘಟಕ) ಇದರ 36 ನೇ ವಾರ್ಷಿಕ ಮಹಾಸಭೆ ಲಯನ್ಸ್ ಸೇವಾ ಮಂದಿರದಲ್ಲಿ ಬಂಟ್ವಾಳ ತಾಲೂಕು ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲೂಕಿನ ರಿಕ್ಷಾ ಚಾಲಕರಿಗೆ ಅನ್ಯಾಯವಾದರೆ, ಯಾವುದೇ ಸಮಸ್ಯೆಗಳಾದ ಸಂದರ್ಭದಲ್ಲಿ ನನ್ನನ್ನು ಸಂಪರ್ಕಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಅವರು ಮಾತನಾಡಿ,ರಿಕ್ಷಾ ಚಾಲಕರ ಶ್ರೇಯೋಭಿವೃದ್ದಿಗಾಗಿ ರಚನೆ ಮಂಡಳಿ ಮೂಲಕ ಉಪಯೋಗವನ್ನು ಪಡೆಯುವ ಮೂಲಕ ಬದುಕು ಹಸನಾಗಿಸಿ ಎಂದು ತಿಳಿಸಿದರು.
ಸಂಘಟನೆ ಮೂಲಕ ಉತ್ತಮ ಕಾರ್ಯಕ್ರಮಗಳಿಗೆ ಇನ್ನಷ್ಟು ಪ್ರೇರಣೆ ನೀಡಲಿ ಎಂದು ಹೇಳಿದರು.
ಚಾಲಕರ ಬದುಕಿನ ಜೊತೆಗೆ ದೇಶದ ಚಿಂತನೆಯ ಮೂಲಕ ಸಮಾಜದಲ್ಲಿ ಜೀವಿಸುವ ಎಂದು ತಿಳಿಸಿದರು.
ಸಂಘದ ಕಾನೂನು ಸಲಹೆಗಾರ ನ್ಯಾಯವಾದಿ ಜಯರಾಮ ರೈ ಮಾತನಾಡಿ, ಸಂಘಟನೆಯ ಬಗ್ಗೆ, ಪ್ರೀತಿ, ಭರವಸೆ, ವಿಶ್ವಾಸ,ನಂಬಿಕೆಯನ್ನು ಬೆಳೆಸಿಕೊಂಡರೆ ತಾನು ಬೆಳೆಯುವುದರ ಜೊತೆಗೆ ಸಂಘಟನೆಯು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಣ್ಣಿನ ವೈದ್ಯರಾದ ಡಾ.ಮರೀಟ ಅವರು ರಿಕ್ಷಾ ಚಾಲಕರಿಗೆ ಆರೋಗ್ಯ ಮಾಹಿತಿ ನೀಡಿದರು.
ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ, ಪುತ್ತೂರು ಅದ್ಯಕ್ಷ ರಾಜೇಶ್ ಮರೀಲು, ಸುಳ್ಯ ಅಧ್ಯಕ್ಷ ರಾಧಾಕೃಷ್ಣ ಸುಳ್ಯ, ಬೆಳ್ತಂಗಡಿ ಅಧ್ಯಕ್ಷ ಕೃಷ್ಣ ಬೆಳಾಲು, ಮೂಡುಬಿದಿರೆ ಅಧ್ಯಕ್ಷ ದೀಪಕ್ ರಾಜ್, ಬಂಟ್ವಾಳ ತಾಲೂಕಿನ
ಸಂಘಟನಾ ಕಾರ್ಯದರ್ಶಿ ಕೃಷ್ಣ ಕುಮಾರ್ ಬಂಟ್ವಾಳ ಉಪಸ್ಥಿತರಿದ್ದರು.
ತಾಲೂಕಿನ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನೆಲ್ಯಡ್ಕ ವಾರ್ಷಿಕ ವರದಿ ವಾಚಿಸಿದರು.
ಜಿಲ್ಲಾ ಉಪಾಧ್ಯಕ್ಷ ನಾರಾಯಣ ಪೂಜಾರಿ ಸ್ವಾಗತಿಸಿದರು. ಆನಂದ ಶೆಟ್ಟಿ ವಂದಿಸಿದರು.
ಉಮಾಶಂಕರ್ ಬಡ್ಡಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…