ಕರಾವಳಿ

ಮಾಜಿ ಸಿಎಂ ಎಸ್ಎಂ‌ ಕೃಷ್ಣ ನಿಧನಕ್ಕೆ ಪೇಜಾವರ ಶ್ರೀ ಸಂತಾಪ

ಉಡುಪಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ .‌ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ರಾಜ್ಯದ ಮುಖ್ಯಮಂತ್ರಿಯಾಗಿಯೂ ಉತ್ತಮ ಕಾರ್ಯನಿರ್ವಹಿಸಿದ್ದು ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಬೆಳೆಸಿ ಸಾವಿರಾರು ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡಿ ಜೀವನದ ದಾರಿಯನ್ನು ತೆರೆದಿಡುವಲ್ಲಿ ಅವರ ದೂರದೃಷ್ಟಿಯ ಪಾತ್ರ ಸದಾ ಸ್ಮರಣೀಯ .‌ ಸಜ್ಜನಿಕೆ ,ಸಭ್ಯತೆ , ಸದಾಚಾರ ಮತ್ತು ಧರ್ಮ ಸಂಪನ್ನರೂ ಆಗಿದ್ದು ಶ್ರೀಮಠದ ಹಾಗೂ ನಮ್ಮ ಗುರುಗಳ ವಿಶೇಷ ಭಕ್ತರಾಗಿದ್ದರು .‌ ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪಂಚಮ ಶ್ರೀ ಕೃಷ್ಣ ಪರ್ಯಾಯದ ಸಂದರ್ಭದಲ್ಲಿ ರಾಷ್ಟ್ರ ರತ್ನ ಬಿರುದಿನೊಂದಿಗೆ ಸಂಮಾನಿಸಿದ್ದನ್ನು ಸ್ಮರಿಸುತ್ತೇವೆ . ಗುರುಗಳ ಬಳಿಕ ನಮ್ಮ ಮೇಲೂ ಅದೇ ಅಭಿಮಾನ‌,ಭಕ್ತಿ ಪ್ರೀತಿಯನ್ನು ಹೊಂದಿದ್ದ ಕೃಷ್ಣ ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ; ಅವರ ಕುಟುಂಬಕ್ಕೂ ಅವರ ವಿಯೋಗದ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶ್ರೀ ಕೃಷ್ಣಪರಮಾತ್ಮನಲ್ಲಿ ಪ್ರಾರ್ಥಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

14 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

14 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

14 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

14 hours ago

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…

14 hours ago

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…

14 hours ago