ಉಳ್ಳಾಲ: ವಾಟ್ಸಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್ಲೈನ್ ಮುಖೇನ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರಿನ ಜಲಸಂದ್ರ ನಿವಾಸಿ ಅಮೀರ್ ಸುಹೇಲ್ ಹಾಗೂ ಕಾಶ್ಮೀರ ನಿವಾಸಿ ಸುಹೈಲ್ ಅಹ್ಮದ್ ವಾನಿ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು 2024ರ ಜು.21 ರಂದು ಪಾರ್ಟ್ ಟೈಮ್ ಜಾಬ್ ಕುರಿತು ವಾಟ್ಸಪ್ ಮತ್ತು ಟೆಲಿಗ್ರಾಂ ಲಿಂಕ್ ಕಳುಹಿಸಿದ್ದರು. ಕೆಲಸ ಏನೆಂದು ಕೇಳಿದ ತಕ್ಷಣ ವೀಡಿಯೋ ಕಳುಹಿಸಿ ಅದರ ಸ್ಕ್ರೀನ್ ಶಾಟ್ ಕಳುಹಿಸಲು ತಿಳಿಸಿ ಅವರಿಗೆ ರೂ.130 ನ್ನು ಪಾವತಿಸಿದ್ದಾರೆ. ನಂತರ ಮತ್ತೆ ಹಾಕಿದ ವೀಡಿಯೋ ತಪ್ಪಾಗಿದೆ ಎಂದು ಹೇಳಿ ಇನ್ನೊಂದು ಲಿಂಕ್ ಕಳುಹಿಸಿದ್ದಾರೆ. ಆ ಲಿಂಕ್ ಓಪನ್ ಮಾಡಿದ ತಕ್ಷಣ ರೂ.1000 ಮೊತ್ತವನ್ನು ಹಾಕಲು ಹೇಳಿ ನಂತರ ಹಂತ ಹಂತವಾಗಿ ಅಕೌಂಟಿನಿಂದ ಬೇರೆ ಬೇರೆ ಖಾತೆಗಳಿಗೆ ಹಣವನ್ನು ವರ್ಗಾಯಿಸಿ ಒಟ್ಟು ರೂ. 28,18,065 ವಂಚನೆ ನಡೆಸಿದ್ದರು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯ ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಈಗಾಗಲೇ ಬೆಂಗಳೂರು, ಮೈಸೂರು ಮೂಲದ 5 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರು ವಿಚಾರಣೆ ವೇಳೆ ಬಂಧಿತರಿಬ್ಬರ ಮಾಹಿತಿ ನೀಡಿದ್ದರು. ಇಬ್ಬರು ಆರೋಪಿಗಳು ಹಲವು ಬ್ಯಾಂಕುಗಳಲ್ಲಿ ಬೇರೆಯವರ ಹೆಸರಿನಲ್ಲಿ ಮತ್ತು ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ಮಾಡಿಸಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಅಲ್ಲದೆ ಬೇರೆಯವರ ಖಾತೆಗೆ ದಿನಕ್ಕೆ 3,000 ದಿಂದ 4,000 ರೂ. ದಷ್ಟು ಹಣ ನೀಡಿ ಬೇರೆ ಬೇರೆ ಕಡೆಗಳಲ್ಲಿ ಅಕೌಂಟ್ ಮಾಡಿಸಿರುವುದು ತಿಳಿದುಬಂದಿದೆ.
ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ನಿರ್ದೇಶನದಂತೆ ಕೊಣಾಜೆ ಠಾಣಾ ನಿರೀಕ್ಷಕ ರಾಜೇಂದ್ರ ಬಿ ಹಾಗೂ ಪಿಎಸ್ ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ಎಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಯಾದ ರೇಷ್ಮಾ, ರಾಮ ನಾಯ್ಕ, ಬಸವನ ಗೌಡ, ದರ್ಶನ್, ಸುರೇಶ್ , ಮುತ್ತು, ಓಗೇನರ್ ಮತ್ತು ಸಂತೋಷ್ ಕಾರ‍್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…