ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ 67ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ 14 ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿರುತ್ತಾರೆ ಹಾಗೂ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿರುತ್ತದೆ. ಈ ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿರುತ್ತಾರೆ.
ವಿದ್ಯಾರ್ಥಿನಿಯು ತೀರಾ ಹಿಂದುಳಿದ ಕುಟುಂಬದವರಾಗಿದ್ದು, ಈ ಸಾಧನೆಗೆ ಮತ್ತು ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕನೆರವಿನ ಹಸ್ತವನ್ನು ನೀಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ್ದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ್ದರು. ಮನೆಗೆ ತೆರಳಿದ ವೇಳೆ ಆಕೆಯ ಸಂಕಷ್ಟವನ್ನು ಅರಿತ ಶಾಸಕರು ನಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…