ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ; ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರಿಗೆ ‘ ಕುಂಬ್ಳೆ ಸಂಸ್ಮರಣ ಪ್ರಶಸ್ತಿ …!

ಮಂಗಳೂರು ; ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಟಾನ (ರಿ) ಮಂಗಳೂರು ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಕರಣ ವೇದಿಕೆ ಜಂಟಿಯಾಗಿ ಅಯೋಜಿಸುವ ಪ್ರತಿಷ್ಟಿತ ಕಾರ್ಯಕ್ರಮ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಕಾರ್ಯಕ್ರಮ ಇದೇ ಬರುವ ಡಿಸೆಂಬರ್ 14 ಶನಿವಾರ ಸಂಜೆ 5 ರಂದು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನ ತೆರೆದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ಬಾವಿಯಿಂದ ಆರಂಭಗೊಂಡ ಈ ಪ್ರಶಸ್ತಿ 2013 ನೇ ಸಾಲಿನಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟರಿಗೆ ನೀಡಲಾಗಿತ್ತು .ಈ ಬಾರಿ ಹಿರಿಯ ಯಕ್ಷಗಾನ ಕಲಾವಿದರೂ ಮತ್ತು ಕುಬ್ಳೇಯವರ ಒಡನಾಡಿಯೂ ಆಗಿದ್ದ ಶೀ ಆರುವ ಗೊರಗಪ್ಪ ಶೆಟ್ಟರಿಗೆ ‘ಕುಂಬ್ಳೆ ಸಂಸ್ಮರಣ ಪ್ರಶಸ್ತಿ – 2024 ‘ ನೀಡಲಾಗುತ್ತದೆ. ಇದರಲ್ಲಿ 25000/- ನಗದು, ಸನ್ಮಾನ ಸ್ಮರಣಿಕೆ ಮುಂತಾದವು ಒಳಗೊಂಡಿದೆ ಎಂದು ತಿಳಿಸಿದ್ದಾರೆ.

ಹಿರಿಯ ಯಕ್ಷಗಾನ ಅರ್ಥದಾರಿ ಮತ್ತು ವಿಮರ್ಶಕರಾದ ಭಾಸ್ಕರ ರೈ ಕುಕ್ಕುವಳ್ಳಿಯವರು ಕುಂಬ್ಳೆಯವರ ಸಂಸ್ಮರಣೆ ಮಾಡಲಿದ್ದಾರೆ. ಅಗರಿ ಎಂಟರ್ ಪ್ರೈಸಸ್ ನ ಮಾಲಕರಾದ ಅಗರಿ ರಾಘವೇಂದ್ರ ರಾವ್ ಮತ್ತು ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿಯವರು ಅತಿಥಿಗಳಾಗಿ ಬರಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ನಾ.ದಾಮೋದರ ಶೆಟ್ಟಿಯವರು ವಹಿಸಲಿದ್ದಾರೆಂದು ಹೇಳಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಹಿರಿಯ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ಸುಧನ್ವ ಮೋಕ್ಷ’ ಎಂಬ ತಾಳಮದ್ದಳೆ ನಡೆಯಲಿದೆ. ಹಿಮ್ಮೇಳದಲ್ಲಿ ಹಿರಿಯ ಯಕ್ಷಗಾನ ಭಾಗವತರಾದ ದೀನೇಶ ಅಮ್ಮಣ್ಣಾಯ ,ಮದ್ದಳೆಯಲ್ಲಿ ಕೃಷ್ಣ ಪ್ರಕಾಶ ಉಳಿತ್ತಾಯ, ಮತ್ತು ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ ಸಹಕರಿಸಲಿದ್ದು ,ಮುಮ್ಮೇಳದಲ್ಲಿ ಡಾ.ಎಂ. ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್ ,ವಾಸುದೇವ ರಂಗಾಭಟ್ ,ಮಧೂರು ಅರ್ಥ ಹೇಳಲಿದ್ದಾರೆಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶಶಿರಾಜ್ ಶೆಟ್ಟಿ ಕಾವೂರು,ಕರುಣಾಕರ್ ಶೆಟ್ಟಿ, ನಾಗೇಶ್ ಶೆಟ್ಟಿ ಬಜಾಲ್ ,ಸತ್ಯನಾರಾಯಣ ಕೆ.ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!