ಕಾಸರಗೋಡು :ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ಭವನದ “ರಜತ ಸಂಭ್ರಮ “ವರ್ಷವಾದ 2025.ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದರು. ಕನ್ನಡ ಭವನದಲ್ಲಿ ಗೌರವ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ “2025ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವರಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…