ಬೆಳಗಾವಿ ; ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ.
ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.
ರಾಜ್ಯ ಸರ್ಕಾರವು ರಾಜಸ್ವ ಹಾಗು ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…