ಜನ ಮನದ ನಾಡಿ ಮಿಡಿತ

Advertisement

ಪ್ಯಾಕ್ಟರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ವಾಹನ ಕಳವು ಪ್ರಕರಣ; ಆರೋಪಿಗಳ ಬಂಧನ

ಪುಂಜಾಲಕಟ್ಟೆ:ಪ್ಯಾಕ್ಟರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ವಾಹನ ಕಳವು ಪ್ರಕರಣದ ಆರೋಪಿಗಳ ಸಹಿತ ವಾಹನವನ್ನು ಪುಂಜಾಲಕಟ್ಟೆ ಎಸ್.ಐ‌.ನಂದಕುಮಾರ್ ನೇತ್ರತ್ವದ ತಂಡ ವಶಪಡಿಸಿಕೊಂಡ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲಯ ಕನಕಪ್ಪ‌ ಹಾಗೂ ರಮೇಶ್ ಚೌಹಾಣ್ ಬಂಧಿತ ಆರೋಪಿಗಳು.

 


‌ ಘಟನೆ ಏನು?
ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್‌ ಫ್ಯಾಕ್ಟರಿಯ ಮಾಲಿಕರಾದ ಟೆರೆನ್ಸ್ ಜೋಶೆಲ್ ವೇಗಸ್ ರವರ KA19D5858 ನೇ ಬೊಲೆರೋ ಪಿಕಪ್‌ ಗೂಡ್ಸ್‌ ವಾಹನವನ್ನು ಡಿ. 2 ರಂದು ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಸಮಯ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, , ಈ ಬಗ್ಗೆ ಡಿ.3ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 76/2024 ಕಲಂ: 303(2) BNS 2023 ರಂತೆ ಪ್ರಕರಣ ದಾಖಲಾಗಿರುತ್ತು.

ಪ್ರಕರಣಕ್ಕೆ ಸಂಬಂದಪಟ್ಟಂತೆ ಆರೋಪಿಗಳನ್ನು ಬಾಗಲಕೋಟೆಯಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದ್ದು ಆರೋಪಿಗಳು ಕಳವು ಮಾಡಿದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ KA19D5858 ನೇ ನಂಬ್ರದ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌, ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೇಂದ್ರ ಡಿ.ಎಸ್ ರವರ ನಿರ್ದೇಶನದಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ರವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ ರವರ ಆದೇಶದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ನಂದ ಕುಮಾರ್‌ ಎಂ.ಎಂ ಮತ್ತು ಓಮನ ಎನ್.ಕೆ ರವರ ಜೊತೆಗೆ ಸಿಬ್ಬಂದಿಗಳಾದ ಸಂದೀಪ್‌ ಎಸ್‌, ರಾಹುಲ್‌ ರಾವ್‌, ರಜಿತ್‌, ಸಲೀಂ ಪಟೇಲ್‌, ಪ್ರಕಾಶ್‌, ರಮ್ಯ ವೇಣೂರು ಠಾಣಾ ಸಿಬ್ಬಂದಿ ಬಸವರಾಜ್ ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್‌ ಮತ್ತು ದಿವಾಕರ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!