ಪುಂಜಾಲಕಟ್ಟೆ:ಪ್ಯಾಕ್ಟರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ವಾಹನ ಕಳವು ಪ್ರಕರಣದ ಆರೋಪಿಗಳ ಸಹಿತ ವಾಹನವನ್ನು ಪುಂಜಾಲಕಟ್ಟೆ ಎಸ್.ಐ.ನಂದಕುಮಾರ್ ನೇತ್ರತ್ವದ ತಂಡ ವಶಪಡಿಸಿಕೊಂಡ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲಯ ಕನಕಪ್ಪ ಹಾಗೂ ರಮೇಶ್ ಚೌಹಾಣ್ ಬಂಧಿತ ಆರೋಪಿಗಳು.
ಘಟನೆ ಏನು?
ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್ ಫ್ಯಾಕ್ಟರಿಯ ಮಾಲಿಕರಾದ ಟೆರೆನ್ಸ್ ಜೋಶೆಲ್ ವೇಗಸ್ ರವರ KA19D5858 ನೇ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಡಿ. 2 ರಂದು ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಸಮಯ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, , ಈ ಬಗ್ಗೆ ಡಿ.3ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 76/2024 ಕಲಂ: 303(2) BNS 2023 ರಂತೆ ಪ್ರಕರಣ ದಾಖಲಾಗಿರುತ್ತು.
ಪ್ರಕರಣಕ್ಕೆ ಸಂಬಂದಪಟ್ಟಂತೆ ಆರೋಪಿಗಳನ್ನು ಬಾಗಲಕೋಟೆಯಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದ್ದು ಆರೋಪಿಗಳು ಕಳವು ಮಾಡಿದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ KA19D5858 ನೇ ನಂಬ್ರದ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್, ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿ.ಎಸ್ ರವರ ನಿರ್ದೇಶನದಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ರವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ರವರ ಆದೇಶದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದ ಕುಮಾರ್ ಎಂ.ಎಂ ಮತ್ತು ಓಮನ ಎನ್.ಕೆ ರವರ ಜೊತೆಗೆ ಸಿಬ್ಬಂದಿಗಳಾದ ಸಂದೀಪ್ ಎಸ್, ರಾಹುಲ್ ರಾವ್, ರಜಿತ್, ಸಲೀಂ ಪಟೇಲ್, ಪ್ರಕಾಶ್, ರಮ್ಯ ವೇಣೂರು ಠಾಣಾ ಸಿಬ್ಬಂದಿ ಬಸವರಾಜ್ ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…