ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮದ್ದ ಎಂಬಲ್ಲಿ ಗಾಂಜಾ ವ್ಯಸನಿ ರೌಡಿ ಶೀಟರ್ ಹಸೈನಾರ್ ಮತ್ತು ಇತರರು ಅಕ್ರಮ ಕೂಟ ಕಟ್ಟಿಕೊಂಡು ಕೊಲೆ ನಡೆಸುವ ಉದ್ದೇಶದಿಂದ ಶಾಹುಲ್ ಹಮೀದ್ ರವರ ಮನೆಗೆ ರಾತ್ರಿ 1:30 ರ ಹೊತ್ತಿಗೆ ಅಕ್ರಮ ಪ್ರವೇಶಗೈದು ಗರ್ಭಿಣಿ ಮಹಿಳೆ ಸಹಿತ ಮನೆಯಲ್ಲಿದ್ದ ಸದಸ್ಯರು ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಬಳಿಕ ಘಟನೆಯನ್ನು ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸಿದ ಮಜೀದ್ ರವರು ಅಕ್ರಮ ಮರಳು ದಂದೆ ನಡೆಸುವ ಸಮಾಜಘಾತುಕ ಶಕ್ತಿಗಳನ್ನು ,ಗಾಂಜಾ ಪೆಡ್ಲರ್ಗಳನ್ನು ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಬೇಕು .
ಮತ್ತು ಅರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಪೊಲೀಸ್ ಇಲಾಖೆ ಯಾವುದೇ ಒತ್ತಡಗಳಿಗೆ ಮಣಿಯದೆ ಇಂತಹ ಸಮಾಜ ವಿರೋಧಿಗಳನ್ನು, ಹೆಡೆಮುರಿ ಕಟ್ಟಬೇಕು, ಅದೇರೀತಿ ಇಂತಹ ಗೂಂಡಾಗಳು ರಾಜಾರೋಷವಾಗಿ ಅಕ್ರಮ ಮರಳು ದಂದೆ ನಡೆಸಿ ವಾಮ ಮಾರ್ಗದಲ್ಲಿ ಹಣ ಸಂಪಾದನೆ ಮಾಡಿ ತಾವೇನು ಮಾಡಿದರು ಕೇಳುವವರು ಇಲ್ಲ ಎಂಬ ಅಹಂಕಾರದಿಂದ ಮೆರೆಯುತ್ತಿದ್ದಾರೆ, ಆದ್ದರಿಂದ ಇವರು ನಡೆಸುವ ಅಕ್ರಮ ಮರಳು ದಂದೆಗೆ ಶಾಶ್ವತ ಕಡಿವಾಣ ಹಾಕಬೇಕು. ಮತ್ತು ಈಗಾಗಲೇ ಹಲವಾರು ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಕಿಡಿಗೇಡಿಗಳ ವಿರುದ್ಧ ಇಲಾಖೆ ಯಾವುದೇ ಮೃದು ಧೋರಣೆ ತಳೆಯದೆ ಕಾನೂನಿನ ರುಚಿ ತೋರಿಸಬೇಕು ಇಲ್ಲದಿದ್ದರೆ ಪಕ್ಷದ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಅಬ್ದುಲ್ ಮಜೀದ್ ಎಚ್ಚರಿಕೆ ನೀಡಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…