ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ತನೇ ತೋಕೂರು ಗ್ರಾಮದ ಒಂದನೇ ವಾರ್ಡಿನ ಸರ್ಕಾರಿ ಹಿಂದುಸ್ತಾನಿ ಶಾಲೆ ಬಳಿ ನಿರ್ಮಾಣವಾಗಲಿರುವ 50 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಓವರ್ ಹೆಡ್ ನೀರಿನ ಟ್ಯಾಂಕ್ ಗೆ ಎಂ ಆರ್ ಪಿ ಎಲ್ ನ ಸಿಎಸ್ಆರ್ ಯೋಜನೆಯಡಿ 25 ಲಕ್ಷ ರೂಪಾಯಿಗಳನ್ನು ಶಾಸಕರು ಮಂಜೂರು ಮಾಡಿದ್ದು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡು ಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ವಹಿಸಿದ್ದರು
ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಆಮೀನ್ ಸದಸ್ಯರಾದ ಮೋಹನ್ ದಾಸ್, ಅಭಿವೃದ್ಧಿ ಅಧಿಕಾರಿ ಸುದೀರ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಮಾಜೀ ಅಧ್ಯಕ್ಷ ಹರಿದಾಸ್ ಭಟ್, ವಿಶ್ವ ಬ್ಯಾಂಕ್ ನೀರು ಸರಬರಾಜು ಸಮಿತಿ 10ನೇ ತೋಕೂರು ಕ್ಲಸ್ಟರ್-2 ರ ಅಧ್ಯಕ್ಷ ಪಿ ಸಿ ಕೋಟ್ಯಾನ್, ವಿನೋದ್ ಬೊಳ್ಳೂರು, ರಮೇಶ್ ದೇವಾಡಿಗ, ವಿನೋದ್ ಸುವರ್ಣ, ಲಕ್ಷ್ಮಣ್ ಸಾಲ್ಯಾನ್ ಪುನರೂರು, ರಮೇಶ್ ಕಲ್ಲಾಪು, ಲೋಹಿತ್ ಕೋಟ್ಯಾನ್ ತೋಕೂರು, ದಾಮೋದರ ಶೆಟ್ಟಿ, ಗೋಪಾಲ್ ಮೂಲ್ಯ, ನಟ್ಟಿ ಹಿತ್ಲು ಕನ್ಸ್ಟ್ರಕ್ಷನ್ ಗುತ್ತಿಗೆದಾರ ಅರುಣ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…