ಬಿಜೆಪಿ ಹಿರಿಯ ನಾಯಕ L. K. ಅಡ್ವಾಣಿ ಅರೋಗ್ಯದಲ್ಲಿ ಏರುಪೇರು

ದೆಹಲಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ L. K. ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾಗಿ ಅಪೊಲೊ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಇದೀಗ ಹೊರ ಬಿದ್ದಿದೆ.
ಕಳೆದ ನವೆಂಬರ್ ೮ ರಂದು ಇವರು ೯೭ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇದಕ್ಕೂ ಮೊದಲು ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಅರೋಗ್ಯ ಹದಗೆಟ್ಟಿದ್ದು, ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ. ಭಾರತ ರತ್ನ ಪಡೆದಿರುವ ಶ್ರೇಷ್ಠ ನಾಯಕ ಬೇಗ ಚೇತರಿಕೊಳ್ಳಲಿ ಎನ್ನುವುದು ಭಾರತೀಯರ ಆಶಯ.



