ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಫಿಲಿಫೈನ್ಸ್‌ನ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ -2024 ಕಿರೀಟ ಗೆದ್ದುಕೊಂಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶೃತಿ ಸ್ವತಃ ತಮ್ಮ ಅನುಭವ ಹಂಚಿಕೊಂಡರು.ಮಂಗಳೂರಿನ ಪಾತ್‌ವೇ ಎಂಟರ್‌ಪ್ರೈಸಸ್‌ನಿಂದ ಸೌಂದರ್ಯ ಸ್ಪರ್ಧೆಗೆ ತಾವು ಕಾಲಿಟ್ಟಿದ್ದು, ಮಂಗಳೂರು ವಲಯ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡೆ. ನಂತರ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ತ್ ಇಂಟರ್‌ನ್ಯಾಶನಲ್ ಪ್ರಶಸ್ತಿಯನ್ನು ಗೆದ್ದು, ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದೆ.ಆ ಬಳಿಕ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದರು.
ಈ ಪ್ರಶಸ್ತಿಯೊಂದಿಗೆ ತನ್ನನ್ನು 5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಆಯ್ಕೆ ಮಾಡಲಾಗಿದೆ ಎಂದವರು ಸಂತಸ ವ್ಯಕ್ತಪಡಿಸಿದರು.
ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದರು.ಸುದ್ದಿಗೋಷ್ಠಿಯಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್‌ನ ದೀಪಕ್ ಗಂಗೂಲಿ ಮತ್ತು ಮರ್ಸಿ ಬ್ಯೂಟಿ ಅಕಾಡೆಮಿಯ ವೀಣಾ ಡಿಸೋಜ, ಅನಿಷಾ ಮತ್ತು ವಿನ್ಸೆಂಟ್ ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…