ಶಾಲಾ ವಾರ್ಷಿಕೋತ್ಸವ: ಉರ್ವಾ ಸಂತ ಅಲೋಶಿಯಸ್ ಶಾಲೆ ಅಭಿವ್ಯಕ್ತಿ- 2024
ಮಂಗಳೂರು : ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವಾ ಮಂಗಳೂರು ಇದರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕೋತ್ಸವ ಅಭಿವ್ಯಕ್ತಿ-2024 ದಿನಾಂಕ 12/12/2024 ಮತ್ತು 13/12/2024 ರಂದು ಉರ್ವ ಚರ್ಚ್ ಸಭಾಂಗಣದಲ್ಲಿ ವಿಜೃಂಭಣೆಯಿoದ ನಡೆಯಿತು. ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವಕ್ಕೆ ಇಮ್ಯಾಕುಲೇಟ್ ಕನ್ಸಪ್ಶೇನ್ ಚರ್ಚ್ ಉರ್ವಾ ಇದರ ಸಹಾಯಕ ಧರ್ಮಗುರುಗಳಾದ ವಂ. ಗುರು ಲ್ಯಾನ್ಸನ್ ಮ್ಯಾಕ್ಸಿಂ ಪಿಂಟೊ ಕಾರ‍್ಯಕ್ರಮದ ಅಧ್ಯಕ್ಷತೆ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀಯುತ ಲಾಯ್ಡ್ ಲೋಬೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಮತ್ತು ಇಮ್ಯಾಕುಲೇಟ್ ಕನ್ಸಪ್ಶೇನ್ ಚರ್ಚ್ ಉರ್ವ ಇದರ ಮುಖ್ಯ ಧರ್ಮಗುರುಗಳಾದ ವಂ. ಗುರು ಬೆಂಜಮಿನ್ ಪಿಂಟೊರವರು ವಹಿಸಿದ್ದರು. ಪದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್, ಮಂಗಳೂರು ಇದರ ಪ್ರಾಂಶುಪಾಲರಾದ ವಂ. ಗುರು ಅರುಣ್ ವಿಲ್ಸನ್ ಲೋಬೋ ಕಾರ‍್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಲಿಕೆಯಲ್ಲಿ ಅತೀ ಹೆಚ್ಚಿನ ಅಂಕ ಪಡೆದ ವಿದ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯಗಳು, ಪ್ರಹಸನ, ಮೈಮ್, ಪಿರಮಿಡ್ ಮುಂತಾದ ಸಾಂಸ್ಕತಿಕ ಕಾರ‍್ಯಕ್ರಮಗಳು ನಡೆದವು.
ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜರವರು ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಾದ ರಿನ್ಶಿ ಸಲ್ಡಾನ್ಹಾ, ಇಶಾನ್ ಡಿ ಶೆಟ್ಟಿ, ಆ್ಯನ್ಸಿಯಾ, ಆರುಷ್, ಅಂಕಿತಾ ಮತ್ತು ಅಶ್ವಿಲ್ ಲೋಬೊ ಕರ‍್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ರೋಸ್ ಡಿ’ಸೋಜ ಮತ್ತು ಶಾಲಾ ವಿದ್ಯಾರ್ಥಿ ನಾಯಕ ಲೆಸ್ಟನ್ ಶರ್ವಿನ್ ಡಿ’ಸೋಜ ವಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಚಿತ್ರ ಮತ್ತು ಪದಾಧಿಕಾರಿಗಳು, ಹೆತ್ತವರು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…