ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ ಅವರು ಆಯ್ಕೆಗೊಂಡಿದ್ದಾರೆ.

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರ ಆಯ್ಕೆ ಬೆನ್ನಲ್ಲೆ ಡಿ.18 ರಂದು ಬೆಳಿಗ್ಗೆ ದೇವಳದ ಆಡಳಿತ ಕಚೇರಿಯಲ್ಲಿ ಆಡಳಿತಾಧಿಕಾರಿ ನವೀನ್ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಸಭೆಯಲ್ಲಿ ನೂತನ ಅಧ್ಯಕರ ಆಯ್ಕೆ ಪ್ರಕ್ರಿಯೆ ನಡೆಯಿತು.
ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ್, ಸಮಿತಿ ಸದಸ್ಯರಾದ ಈಶ್ವರ ಬೇಡೆಕರ್, ಮಹಾಬಲ ರೈ ವಳತ್ತಡ್ಕ, ವಿನಯ್, ಕೃಷ್ಣವೇಣಿ, ದಿನೇಶ್ ಪಿ ವಿ, ನಳಿನಿ ಪಿ ಶೆಟ್ಟಿ, ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಇದೇ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಯಿತು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕ ಪಕ್ಕಳ,ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು ಸಹಿತ ವಿವಿಧ ಸಂಘಟನೆ, ಪಕ್ಷದ ಮುಖಂಡರು ನೂತನ ಸಮಿತಿ ಸದಸ್ಯರನ್ನು ಅಭಿನಂದಿಸಿದರು.



