ಜನ ಮನದ ನಾಡಿ ಮಿಡಿತ

Advertisement

ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ ಭಟ್ ಅವರು ಆಯ್ಕೆಗೊಂಡಿದ್ದಾರೆ.

ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರ ಆಯ್ಕೆ ಬೆನ್ನಲ್ಲೆ ಡಿ.18 ರಂದು ಬೆಳಿಗ್ಗೆ ದೇವಳದ ಆಡಳಿತ ಕಚೇರಿಯಲ್ಲಿ ಆಡಳಿತಾಧಿಕಾರಿ ನವೀನ್ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಸಭೆಯಲ್ಲಿ ನೂತನ ಅಧ್ಯಕರ ಆಯ್ಕೆ ಪ್ರಕ್ರಿಯೆ ನಡೆಯಿತು.

ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ್, ಸಮಿತಿ ಸದಸ್ಯರಾದ ಈಶ್ವರ ಬೇಡೆಕರ್, ಮಹಾಬಲ ರೈ ವಳತ್ತಡ್ಕ, ವಿನಯ್, ಕೃಷ್ಣವೇಣಿ, ದಿನೇಶ್ ಪಿ ವಿ, ನಳಿನಿ ಪಿ ಶೆಟ್ಟಿ, ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಇದೇ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಯಿತು. ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯೆ ಮಲ್ಲಿಕ ಪಕ್ಕಳ,ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ಶಿವನಾಥ ರೈ ಮೇಗಿನಗುತ್ತು ಸಹಿತ ವಿವಿಧ ಸಂಘಟನೆ, ಪಕ್ಷದ ಮುಖಂಡರು ನೂತನ ಸಮಿತಿ ಸದಸ್ಯರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!