ಜನ ಮನದ ನಾಡಿ ಮಿಡಿತ

Advertisement

ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ಜುಲೈ 17 ರಂದು ಯೋಜನೆಗೆ ಆಪ್ ಚಾಲನೆ ನೀಡಿ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗಿದ್ದಾರೆ. ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು . ಮೂಲಕ ತಿಳಿಸಿ ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಮತ್ತು ನಗರ ಪ್ರದೇಶದಲ್ಲಿರುವವರು ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಪರ್ಯಾಯವಾಗಿ “ಪ್ರಜಾಪ್ರತಿನಿಧಿ” ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ಮಹಿಳೆಯರು ನೋಂದಾಯಿಸಿಕೊಳ್ಳಬಹುದು. ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ ಬುಕ್‌ ನಂಬರ್ ಜೋಡಣೆಯಾಗಿರುವ ಮಾಹಿತಿಯನ್ನು ಫಲಾನುಭವಿಗಳು ಕೊಡಬೇಕು. ಕೇಂದ್ರದಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡಲೇ ನೀಡಲಾಗುತ್ತಿದ್ದು ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ಕಳುಹಿಸಲಾಗುವುದು ಎಂದು ಹೇಳಿದರು. ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಹೋದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!