ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ಜುಲೈ 17 ರಂದು ಯೋಜನೆಗೆ ಆಪ್ ಚಾಲನೆ ನೀಡಿ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗಿದ್ದಾರೆ. ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು . ಮೂಲಕ ತಿಳಿಸಿ ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಮತ್ತು ನಗರ ಪ್ರದೇಶದಲ್ಲಿರುವವರು ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಪರ್ಯಾಯವಾಗಿ “ಪ್ರಜಾಪ್ರತಿನಿಧಿ” ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ಮಹಿಳೆಯರು ನೋಂದಾಯಿಸಿಕೊಳ್ಳಬಹುದು. ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಂಬರ್ ಜೋಡಣೆಯಾಗಿರುವ ಮಾಹಿತಿಯನ್ನು ಫಲಾನುಭವಿಗಳು ಕೊಡಬೇಕು. ಕೇಂದ್ರದಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡಲೇ ನೀಡಲಾಗುತ್ತಿದ್ದು ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ಕಳುಹಿಸಲಾಗುವುದು ಎಂದು ಹೇಳಿದರು. ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಹೋದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…