ಮಂಗಳೂರು; ತೆಂಕಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ.12ರಂದು ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಸರ ಎಳೆದೊಯ್ದಿದ್ದ ಪ್ರಕರಣದ ಆರೋಪಿಯನ್ನು ಬಚ್ಛೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಹಳೆಯಂಗಡಿಯ ಇಂದಿರಾ ನಗರ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್ (30) ಬಂಧಿತ ಆರೋಪಿ. ಈತನಿಂದ ಮಹಿಳೆಯ ಕುತ್ತಿಗೆಯಿಂದ ಎಳೆದೊಯ್ದಿದ್ದ 70 ಸಾವಿರ ರೂ. ಮೌಲ್ಯದ ಚಿನ್ನದ ಸರ, 50 ಸಾವಿರ ರೂ. ಮೌಲ್ಯದ ಸ್ಕೂಟರ್, 50 ಸಾವಿರ ರೂ. ಮೌಲ್ಯದ ಆಟೋ ರಿಕ್ಷಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆ, ಮೂಲ್ಕಿ ಬಜ್ಜೆ, ಉಪ್ಪಿನಂಗಡಿ, ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಸುಲಿಗೆ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. ಈತ 2 ತಿಂಗಳ ಹಿಂದೆ ಜಾಮೀನು ಪಡೆದು ಹೊರ ಬಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…