ಜನ ಮನದ ನಾಡಿ ಮಿಡಿತ

Advertisement

ಮಾದಕ ವಸ್ತು ಮಾರಾಟ ಆರೋಪ: ನೈಜೀರಿಯಾ ಪ್ರಜೆ ಬಂಧನ

ಮಂಗಳೂರು;ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್‌ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್‌ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

ನೈಜೀರಿಯಾದ ಮೈಕೆಲ್ ಒಕ್ಸಾರ್ ಒಡಿಪ್ಪೋ (44) ಬಂಧಿತ ಆರೋಪಿ.

2024ನೇ ಮಾರ್ಚ್ ತಿಂಗಳಲ್ಲಿ ಉಳ್ಳಾಲದ ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಶಾನ್ ನವಾಝ್, ಅಶ್ವಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಇವರು ಗೋವಾದಿಂದ ಕೋಕೆನ್ ಖರೀದಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಬಂಧಿತರ ವಶದಿಂದ 34 ಗ್ರಾಂ ಕೋಕೆನ್ ಹಾಗೂ ಇತರ ಒಟ್ಟು ರೂ. 2,72,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಿಗೆ ಕೋಕೆನ್ ನೀಡಿದ ಗೋವಾದ ಡ್ರಗ್ ಪೆಡ್ಕರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಉತ್ತರ ಗೋವಾದ ಕಾಲನ್ ಗೂಟ್ ಎಂಬಲ್ಲಿಂದ ವಶಕ್ಕೆ ಪಡೆದಿದ್ದಾರೆ.

ಆತನ ವಶದಿಂದ 30 ಗ್ರಾಂ ಕೋಕೆನ್, ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು-2, ನಗದು ಹಣ 4500 ರೂ. ಡಿಜಿಟಲ್ ತೂಕ ಮಾಪನ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 11,25,000 ರೂ. ಆಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!