ಮಂಗಳೂರು;ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್‌ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್‌ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೈಜೀರಿಯಾದ ಮೈಕೆಲ್ ಒಕ್ಸಾರ್ ಒಡಿಪ್ಪೋ (44) ಬಂಧಿತ ಆರೋಪಿ.
2024ನೇ ಮಾರ್ಚ್ ತಿಂಗಳಲ್ಲಿ ಉಳ್ಳಾಲದ ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಶಾನ್ ನವಾಝ್, ಅಶ್ವಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಇವರು ಗೋವಾದಿಂದ ಕೋಕೆನ್ ಖರೀದಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಬಂಧಿತರ ವಶದಿಂದ 34 ಗ್ರಾಂ ಕೋಕೆನ್ ಹಾಗೂ ಇತರ ಒಟ್ಟು ರೂ. 2,72,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಿಗೆ ಕೋಕೆನ್ ನೀಡಿದ ಗೋವಾದ ಡ್ರಗ್ ಪೆಡ್ಕರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಉತ್ತರ ಗೋವಾದ ಕಾಲನ್ ಗೂಟ್ ಎಂಬಲ್ಲಿಂದ ವಶಕ್ಕೆ ಪಡೆದಿದ್ದಾರೆ.
ಆತನ ವಶದಿಂದ 30 ಗ್ರಾಂ ಕೋಕೆನ್, ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು-2, ನಗದು ಹಣ 4500 ರೂ. ಡಿಜಿಟಲ್ ತೂಕ ಮಾಪನ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 11,25,000 ರೂ. ಆಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…